Home » ಬಿಸಿಲೆ: ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ!! ಬಿಸಿಲೆ ಘಾಟ್ ನಲ್ಲಿ ನಡೆದ ಘಟನೆ, ಕಾರು ಚಾಲಕನಿಗೆ ಗಂಭೀರ ಗಾಯ

ಬಿಸಿಲೆ: ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ!! ಬಿಸಿಲೆ ಘಾಟ್ ನಲ್ಲಿ ನಡೆದ ಘಟನೆ, ಕಾರು ಚಾಲಕನಿಗೆ ಗಂಭೀರ ಗಾಯ

0 comments

ಬಿಸಿಲೆ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಕಾರು ಚಾಲಕ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಗಂಭೀರ ಗಾಯಗೊಂಡಿರುವ ಗಾಯಾಳುವನ್ನು ಮಂಗಳೂರು ಮೂಲದ ರವಿ ಎಂದು ಗುರುತಿಸಲಾಗಿದ್ದು,ಬಿಸಿಲೆ ಘಾಟ್ ನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಚಾಲಕ ರವಿಯವರ ಕಾಲು ಮುರಿತಕ್ಕೆ ಒಳಗಾಗಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

You may also like

Leave a Comment