Home » ಕಾರು ಅಪಘಾತ: ಕರ್ನಾಟಕ ಹಿರಿಯ IAS ಅಧಿಕಾರಿ ಮಹಾಂತೇಶ್‌ ಬೀಳಗಿ ಸೇರಿ ಮೂವರು ಸಾವು

ಕಾರು ಅಪಘಾತ: ಕರ್ನಾಟಕ ಹಿರಿಯ IAS ಅಧಿಕಾರಿ ಮಹಾಂತೇಶ್‌ ಬೀಳಗಿ ಸೇರಿ ಮೂವರು ಸಾವು

0 comments

ಕಲಬುರಗಿ: ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತಕ್ಕೀಡಾಗಿದ್ದು, ಈ ಘಟನೆಯಲ್ಲಿ ಮಹಾಂತೇಶ್‌ ಬಿಳಗಿ ಸೇರಿ ಮೂವರು ಸಾವಿಗೀಡಾಗಿದ್ದಾರೆ. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್‌ ಬಳಿ ಅಪಘಾತ ನಡೆದಿದೆ.

ವಿಜಯಪುರದಿಂದ ಕಲಬುರಗಿಗೆ ಇಂದು ತೆರಳುತ್ತಿದ್ದ ಸಂದರ್ಭದಲ್ಲಿ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್‌ ಬಳಿ ಈ ಘಟನೆ ನಡೆದಿದ್ದು, ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾಗಿದೆ ಎಂದು ವರದಿಯಾಗಿದೆ.

ಶಂಕರ ಬೀಳಗಿ, ಈರಣ್ಣ ಶಿರಸಂಗಿ ಸಹೋದರರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.

ಮಹಾಂತೇಶ್‌ ಬೀಳಗಿ ಅವರು ಬೆಸ್ಕಾಂ ಎಂಡಿ ಆಗಿದ್ದರು. ದಾವಣಗೆರೆ, ಉಡುಪಿ ಸೇರಿ ಕರ್ನಾಟಕದ ಬೇರೆ ಬೇರೆ ಕಡೆ ಕೆಲಸ ನಿರ್ವಹಿಸಿದ್ದರು.

You may also like