Home » Chitradurga Bus Accident: PNRF ನಿಧಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ: ಮೋದಿ ಸಂತಾಪ

Chitradurga Bus Accident: PNRF ನಿಧಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ: ಮೋದಿ ಸಂತಾಪ

0 comments

Chitradurga Bus Accident: ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (PNRF) 2 ಲಕ್ಷ ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಪ್ರಧಾನಿ ಮೋದಿ (PM Narendra Modi) ಹೇಳಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಅವರು ಕರ್ನಾಟಕದ ಚಿತ್ರದುರ್ಗ (Chitradurga) ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಬರೆದುಕೊಂಡಿದ್ದಾರೆ.

You may also like