Chitradurga Bus Accident: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪದ ಗೊರ್ಲತ್ತು ಬಳಿ ಸಂಭವಿಸಿದ ಭೀಕರ ಬಸ್ ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ ₹5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಪರಿಹಾರ ಘೋಷಣೆ ಮತ್ತು ಸಿಎಂ ಸಂತಾಪ: ದುರಂತದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, “ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ₹50,000 ಪರಿಹಾರ ನೀಡಲಾಗುವುದು,” ಎಂದು ತಿಳಿಸಿದ್ದಾರೆ.
ಗಾಯಾಳುಗಳಿಗೆ ಉಚಿತ ಮತ್ತು ಉತ್ತಮ ಚಿಕಿತ್ಸೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಬೆಂಗಳೂರಿನಿಂದ ಗೋಕರ್ಣಕ್ಕೆ ಕ್ರಿಸ್ಮಸ್ ರಜೆಯ ಹಿನ್ನೆಲೆಯಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದವರ ಪಯಣ ಈ ರೀತಿ ಸಾವಿನೊಂದಿಗೆ ಕೊನೆಗೊಂಡಿರುವುದು ಅತ್ಯಂತ ವಿಷಾದನೀಯ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ’ ಎಂದು ಸಿಎಂ ಭಾವುಕವಾಗಿ ನುಡಿದಿದ್ದಾರೆ.
