ವಿಶಾಖಪಟ್ಟಣಂ: ವಿಶಾಖಪಟ್ಟಣಂನಿಂದ 66 ಕಿ.ಮೀ. ದೂರದಲ್ಲಿರುವ ಯಲಮಂಚಿಲಿಯಲ್ಲಿ ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಧ್ಯರಾತ್ರಿ 12.45 ಕ್ಕೆ ಅಗ್ನಿ ಅವಘಡ ನಡೆದಿದ್ದು, ರೈಲು ಬೆಂಕಿ ಹೊತ್ತಿಕೊಂಡಾಗ ಒಂದು ಬೋಗಿಯಲ್ಲಿ 82 ಪ್ರಯಾಣಿಕರು ಮತ್ತು ಇನ್ನೊಂದು ಬೋಗಿಯಲ್ಲಿ 76 ಪ್ರಯಾಣಿಕರು ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರನ್ನು ಚಂದ್ರಶೇಖರ್ ಸುಂದರಂ ಎಂದು ಗುರುತಿಸಲಾಗಿದೆ. ಹಾನಿಗೊಳಗಾದ ಎರಡು ಬೋಗಿಗಳನ್ನು ರೈಲಿನಿಂದ ಬೇರ್ಪಡಿಸಲಾಗಿದ್ದು, ಅದು ಎರ್ನಾಕುಲಂ ಕಡೆಗೆ ಸಾಗುತ್ತಿದೆ. ಹಾನಿಗೊಳಗಾದ ಬೋಗಿಗಳಲ್ಲಿರುವ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ಕಳುಹಿಸಲಾಗುತ್ತಿದ್ದು, ಬೆಂಕಿಯ ಕಾರಣ ಕಂಡು ಹಿಡಿಯುವ ಕೆಲಸ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
