Home » ಕಲಬುರಗಿ: ಮಹಾಂತೇಶ್‌ ಬೀಳಗಿ ಸಾವು ಪ್ರಕರಣ: ಚಾಲಕನ ವಿರುದ್ಧ ಎಫ್‌ಐಆರ್‌ ದಾಖಲು

ಕಲಬುರಗಿ: ಮಹಾಂತೇಶ್‌ ಬೀಳಗಿ ಸಾವು ಪ್ರಕರಣ: ಚಾಲಕನ ವಿರುದ್ಧ ಎಫ್‌ಐಆರ್‌ ದಾಖಲು

0 comments

ಕಲಬುರಗಿ: ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಾಲಕ ಆರೋಕಿಯಾ ಆಂಥೋನಿ ರಾಜ ವಿರುದ್ಧ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿದೆ.

ಮಹಾಂತೇಶ್‌ ಬೀಳಗಿ ಸಂಬಂಧಿ ಬಸವರಾಜ್‌ ಕಮರಟಗಿ ಎನ್ನುವವರು ದೂರನ್ನು ನೀಡಿದ್ದಾರೆ. ದೂರಿನ ಅನ್ವಯ ಜೇವರ್ಗಿ ಠಾಣೆಯ ಪೊಲೀಸರು ಚಾಲಕ ಆರೋಕಿಯಾ ಆಂಥೋನಿ ರಾಜ ವಿರುದ್ಧ 281, 125(A)125(B)106 ಬಿಎನ್‌ಎಸ್‌ ಅಡಿ ಎಫ್‌ಐಆರ್‌ ದಾಖಲು ಮಾಡಲಾಗಿದೆ.

ಚಾಲಕನ ಅತಿವೇಗ ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖ ಮಾಡಲಾಗಿದೆ. ಕಾರು ರಸ್ತೆ ಬದಿಯ ಬ್ರಿಡ್ಜ್‌ಗೆ ಡಿಕ್ಕಿಯಾಗಿ ನಾಲ್ಕೈದು ಬಾರಿ ಪಲ್ಟಿಯಾಗಿದ್ದು, ಪಲ್ಟಿಯಾದ ಸ್ಥಳದಲ್ಲಿ ಇಬ್ಬರು ಸಾವಿಗೀಡಾಗಿದ್ದರೆ, ಆಸ್ಪತ್ರೆಯಲ್ಲಿ ಐಎಎಸ್‌ ಅಧಿಕಾರಿ ಮಹಾಂತೇಶ ಬೀಳಗಿ ಸಾವಿಗೀಡಾಗಿದ್ದಾರೆ, ಕಾರು ಚಾಲಕ ಆಂಥೋನಿ ರಾಜ್‌ ಕೂಡಾ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿರುವುದಾಗಿ ವರದಿಯಾಗಿದೆ.

You may also like