3

ಕಲ್ಮಂಜ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಚಾರ್ಮಾಡಿ-ಉಜಿರೆ ರಸ್ತೆಯ ನಿಡಿಗಲ್‌ನಲ್ಲಿ ಜ.18 ರಂದು ಬೆಳಿಗ್ಗೆ ಸಂಭವಿಸಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಕುರಿತು ವರದಿಯಾಗಿದೆ.

ಕಾರಿನಲ್ಲಿದ್ದವರು ಶಿವಮೊಗ್ಗದಿಂದ ಹೊರಟು ಧರ್ಮಸ್ಥಳ ತೆರಳುತ್ತಿದ್ದರು ಎನ್ನಲಾಗಿದೆ. ನಿಡಿಗಲ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಚರಂಡಿಗೆ ಪಲ್ಟಿಯಾಗಿದ್ದು, ಕಾರು ಸಂಪೂರ್ಣ ಹಾನಿಯಾದರೂ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
