3
ಮಡಂತ್ಯಾರು: ಕೊಯ್ಯೂರು ಗ್ರಾಮದ ಅದೂರು ಪೆರಾಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರಮೇಶ್ ಅವರು ಸಂಜೆ ಶಾಲೆ ಬಿಟ್ಟು ಮನೆಗೆ ತೆರಳುವ ವೇಳೆ ಸರಕಾರಿ ಪ್ರೌಢಾ ಶಾಲಾ ಸಮೀಪ ಹಿಂದಿನಿಂದ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದ ಸ್ಥಳೀಯ ಯುವಕ ಶಿಕ್ಷಕನಿಗೆ ಬಲವಾಗಿ ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ.
ಈ ಘಟನೆಯಲ್ಲಿ ಶಾಲಾ ಶಿಕ್ಷಕ ರಮೇಶ್ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದು, ಅವರನ್ನು ಕೂಡಲೇ ಸ್ಥಳೀಯರು ಅವರನ್ನು ಬೆಳ್ತಂಗಡಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.
ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ನಡೆಸಿದರು.
