Home » ಮಡಿಕೇರಿ: ವಿರಾಜಪೇಟೆ ಬಳಿ ಹೊತ್ತಿ ಉರಿದ ಪ್ರವಾಸಿ ಬಸ್

ಮಡಿಕೇರಿ: ವಿರಾಜಪೇಟೆ ಬಳಿ ಹೊತ್ತಿ ಉರಿದ ಪ್ರವಾಸಿ ಬಸ್

0 comments

ಮಡಿಕೇರಿ: ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ವಿರಾಜಪೇಟೆಯ ಮಾಕುಟ್ಟ ಬಳಿಯ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ನಡೆದಿದೆ.

ಕೇರಳ ನೋಂದಣಿಯ ಖಾಸಗಿ ಬಸ್‌ ಇದಾಗಿದ್ದು, ಪ್ರವಾಸಿಗರನ್ನು ಇಳಿಸಿ ವಾಪಾಸು ತೆರಳುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಬಸ್‌ನಲ್ಲಿ ಚಾಲಕ ಮತ್ತು ನಿರ್ವಾಹಕ ಇಬ್ಬರೇ ಇದ್ದಿದ್ದು, ಯಾವುದೇ ಪ್ರಾಣಾಪಾಯ ನಡೆದಿಲ್ಲ ಎಂದು ವರದಿಯಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ತೆರಳಿ ಬೆಂಕಿ ನಂದಿಸಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಕೊಡಗು, ಕೇರಳ, ಮಾಕುಟ್ಟ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿದೆ ಎನ್ನಲಾಗಿದೆ.

You may also like