Home » ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್‌-ಕಾರು ಅಪಘಾತ: ಮೂವರ ಸಾವು

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್‌-ಕಾರು ಅಪಘಾತ: ಮೂವರ ಸಾವು

0 comments

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್‌ ಬಳಿ ಮಂಗಳವಾರ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿ ಮೂವರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ನಡೆದಿದೆ.

ಮೃತರನ್ನು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ಫಾತಿಮಾ (76), ರಿಹಾನ್‌ (15) ಮತ್ತು ರಾಹಿಲ್‌ (9) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಒಟ್ಟು ಆರು ಜನರಿದ್ದರು ಎಂದು ವರದಿಯಾಗಿದೆ.

ಸ್ವಿಫ್ಟ್‌ ಕಾರಿನಲ್ಲಿದ್ದವರು ಚೆನ್ನಗಿರಿಯಿಂದ ಶೃಂಗೇರಿ ಕಡೆಗೆ ತೆರಳುತ್ತಿದ್ದು, ಈ ವೇಳೆ ಮಂಗಳೂರಿನಿಂದ ರಾಯಚೂರು ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಭಾರತೀಪುರ ಕ್ರಾಸ್‌ ಬಳಿ ಮುಖಾಮುಖಿ ಡಿಕ್ಕಿ ಉಂಟಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಭಾಗಕ್ಕೂ ಹಾನಿ ಉಂಟಾಗಿದೆ.

ಅಪಘಾತದಲ್ಲಿ ಗಾಯಗೊಂಡವರನ್ನು ಕೂಡಲೇ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ತೀರ್ಥಹಳ್ಳಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

You may also like