Home » ರಾಜ್ಯ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ- ಸದ್ಯದಲ್ಲೇ ಹಳೆ ಪಿಂಚಣಿ ಜಾರಿ !! ಸಿಎಂ ಕೊಟ್ರು ಗುಡ್ ನ್ಯೂಸ್

ರಾಜ್ಯ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ- ಸದ್ಯದಲ್ಲೇ ಹಳೆ ಪಿಂಚಣಿ ಜಾರಿ !! ಸಿಎಂ ಕೊಟ್ರು ಗುಡ್ ನ್ಯೂಸ್

0 comments

Old Pension Scheme: ಸರಕಾರಿ ನೌಕರರು ಹಲವು ದಿನಗಳಿಂದ ಹಳೆ ಪಿಂಚಣಿ ಯೋಜನೆ ( Old Pension Scheme) ಜಾರಿಗಾಗಿ ಪ್ರತಿಭಟನೆ ನಡೆಸುತ್ತಿದ್ದು. ಈ ಹಿನ್ನೆಲೆಯಲ್ಲಿ ಈಗಾಗಲೇ ಸರ್ಕಾರದ ಪ್ರತಿನಿಧಿಗಳ ಜೊತೆಗೆ ಚರ್ಚೆ ನಡೆದಿವೆ.

ಕೇಂದ್ರ ಸರ್ಕಾರಿ ನೌಕರರು ಹಾಗೂ ಹಲವು ರಾಜ್ಯ ಸರ್ಕಾರಿ ನೌಕರರು ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವಂತೆ ಒತ್ತಾಯಿಸಿದ್ದು, ಇದಕ್ಕಾಗಿ ಹಲವು ಪ್ರತಿಭಟನೆಗಳು ನಡೆಯುತ್ತಿವೆ. ಈಗಾಗಲೇ ಹಲವು ರಾಜ್ಯ ಸರ್ಕಾರಗಳು ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿವೆ.

ಇದೀಗ ಸಿಕ್ಕಿಂ ಮುಖ್ಯಮಂತ್ರಿ ಬಿಎಸ್ ತಮಾಂಗ್ ಕೋಲೆ ಸೋಮವಾರ ಸಿಕ್ಕಿಂನಲ್ಲಿ ಹಳೆಯ ಪಿಂಚಣಿ ಯೋಜನೆ ಮರು ಜಾರಿಯಾಗಲಿದೆ ಎಂದು ಶುಭ ಸುದ್ದಿ ಪ್ರಕಟಿಸಿದ್ದಾರೆ. ಮಾಹಿತಿ ಪ್ರಕಾರ ಸಿಕ್ಕಿಂ ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಿಕ್ಕಿಂ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಪರಿಷ್ಕರಿಸುವ ಸಾಧ್ಯತೆಯನ್ನು ಪರಿಶೀಲಿಸಲು, ಸಿಬ್ಬಂದಿ ಇಲಾಖೆ ಕಾರ್ಯದರ್ಶಿ ರಿನ್ಸಿಂಗ್ ಚೆವಾಂಗ್ ಭುಟಿಯಾ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿತ್ತು.

ಇನ್ನು ಕರ್ನಾಟಕದಲ್ಲಿಯೂ ಹಳೆಯ ಪಿಂಚಣಿ ಯೋಜನೆಗಾಗಿ ಪ್ರತಿಭಟನೆಗಳು ನಡೆಯುತ್ತಿವೆ. ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆ ಜಾರಿಗೆ ತರುವಂತೆ ರಾಜ್ಯ ಸರ್ಕಾರಿ ನೌಕರರು ನಿರಂತರವಾಗಿ ಒತ್ತಾಯಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆ ಜಾರುಗೆ ತರುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಹೇಳಿತ್ತು.

ಸದ್ಯ ಕಳೆದ ಕೆಲವು ದಿನಗಳಿಂದ ವಿವಿಧ ಸಂಘಟನೆಗಳು ವಿವಿಧ ಪ್ರತಿಭಟನೆಗಳನ್ನು ನಡೆಸುತ್ತಿದ್ದು,
ವಿವಿಧ ರಾಜ್ಯಗಳಲ್ಲಿ ಹಳೆಯ ಪಿಂಚಣಿ ಯೋಜನೆ ಜಾರಿಯಾಗಿದ್ದರೂ, ಇನ್ನೂ ಕರ್ನಾಟಕ ರಾಜ್ಯ ಸರ್ಕಾರ ಈ ಯೋಜನೆಯನ್ನು ಏಕೆ ಜಾರಿಗೊಳಿಸುತ್ತಿಲ್ಲ ಎನ್ನುವುದು ರಾಜ್ಯ ಸರ್ಕಾರಿ ನೌಕರರು ಪ್ರಶ್ನೆ ಮಾಡುತ್ತಿದ್ದಾರೆ.

You may also like

Leave a Comment