ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅದರಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ. ಪಡಿತರ ಚೀಟಿದಾರರಿಗೆ ಯೋಜನೆಯಡಿ ಸರ್ಕಾರ ಪ್ರತಿ ತಿಂಗಳು ಅನ್ನಭಾಗ್ಯ ನ್ಯಾಯಬೆಲೆ ಪಡಿತರ ಅಂಗಡಿಗಳ ಮೂಲಕ ಪಡಿತರ ವಿತರಣೆ ಮಾಡುತ್ತದೆ. ಇದೀಗ, ಹೊಸದಾಗಿ `ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಸಿದವರಿಗೆ ಬಹುಮುಖ್ಯವಾದ ಮಾಹಿತಿ ಇಲ್ಲಿದೆ
ಬೆಳಗಾವಿಯಲ್ಲಿ ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರ ಪೈಕಿ 15 ಸಾವಿರ ಮಂದಿಯ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪಡಿತರ ಚೀಟಿ ವಿತರಿಸುವ ಕಾರ್ಯ ಪ್ರಗತಿಯಲ್ಲಿದ್ದು, ನವೆಂಬರ್ 28 ರಂದು ಅರ್ಹ ಅರ್ಜಿದಾರರಿಗೆ ಹೊಸದಾಗಿ ಕಾರ್ಡ್ ನೀಡಲು ಆದೇಶ ಹೊರಡಿಸಲಾಗಿದೆ. ಪ್ರಸ್ತುತ ಅರ್ಜಿ ಸಲ್ಲಿಕೆಯಾಗಿರುವ ಪೈಕಿ 2,60,418 ಅರ್ಜಿಗೆ ಮಂಜೂರಾತಿ ಸಿಕ್ಕಿದ್ದು, 3,43,856 ಅರ್ಜಿ ಪರಿಶೀಲನಾ ಹಂತದಲ್ಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ
ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಈ ಬಗ್ಗೆ ಸಿಎಂ ಬೊಮ್ಮಾಯಿ ಮಾಹಿತಿ ನೀಡಿದ್ದು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ 2021-22 ನೇ ಸಾಲಿನಲ್ಲಿ ಆದ್ಯತಾ ಕಾರ್ಡ್ ಗೆ 7,61,902 ಅರ್ಜಿ ಸ್ವೀಕರಿಸಿದ್ದು, ಈ ಪೈಕಿ 1,57,628 ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ತಿಳಿಸಿದ್ದಾರೆ.
