Home » ಮಹಿಳೆಯರಿಗೆ ಸರ್ಕಾರದ ಈ ಯೋಜನೆಯಡಿ ಸಿಗುತ್ತೆ ಬಡ್ಡಿರಹಿತ ಸಾಲ | ಯಾವ ಉದ್ಯಮ ಆರಂಭಿಸಲು ಸಾಲ ನೀಡುತ್ತೆ ಎಂಬುದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ

ಮಹಿಳೆಯರಿಗೆ ಸರ್ಕಾರದ ಈ ಯೋಜನೆಯಡಿ ಸಿಗುತ್ತೆ ಬಡ್ಡಿರಹಿತ ಸಾಲ | ಯಾವ ಉದ್ಯಮ ಆರಂಭಿಸಲು ಸಾಲ ನೀಡುತ್ತೆ ಎಂಬುದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ

0 comments

ಯಾವುದೇ ಮಹಿಳೆಯು ಕೂಡ ಇನ್ನೊಬ್ಬರ ಮೇಲೆ ಅವಲಂಬಿತವಾಗಿರಲು ಬಯಸುವುದಿಲ್ಲ. ಈ ನಿಟ್ಟಿನಲ್ಲಿ ತನ್ನದೇ ಉದ್ಯೋಗ ಪ್ರಾರಂಭಿಸುವ ಮೂಲಕ ಹೊಸ ಜೀವನ ಕಟ್ಟಿಕೊಳ್ಳಲು ಬಯಸುತ್ತಾರೆ. ಇಂತಹ ಸ್ವಾವಲಂಬಿ ಮಹಿಳೆಯರಿಗೆ ಸಹಾಯವಾಗಲೆಂದೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ.

ಅದರಂತೆ ಇದೀಗ ಕೇಂದ್ರ ಸರ್ಕಾರದ ಮಹಿಳಾ ಅಭಿವೃದ್ಧಿ ನಿಗಮ ಯೋಜನೆಯೊಂದನ್ನು ರೂಪಿಸಿದ್ದು, ಇದರ ಮೂಲಕ ಸ್ವಾವಲಂಬಿ ಮಹಿಳೆಯರಿಗೆ ಸಾಲ ಸೌಲಭ್ಯವನ್ನು ಒದಗಿಸಲಿದೆ. ಈ ವಿಶೇಷ ಯೋಜನೆಯೇ ‘ಉದ್ಯೋಗಿನಿ ಸ್ಕೀಮ್’. ಇದು ಉದ್ಯಮ ಆರಂಭಿಸಿ ಯಶಸ್ಸು ಕಾಣಬೇಕೆಂದು ಹಂಬಲಿಸುವ ಬಡ ಮಹಿಳೆಯರಿಗಾಗಿ ಸರ್ಕಾರ ಆರಂಭಿಸಿರುವ ಯೋಜನೆಯಾಗಿದೆ.

ಈ ಯೋಜನೆಯಡಿ ಮಹಿಳೆಯರು 3 ಲಕ್ಷ ರೂ.ವರೆಗೆ ಬಡ್ಡಿರಹಿತ ಸಾಲ ಪಡೆಯಬಹುದಾಗಿದೆ. ಸುಮಾರು 88 ವಿಧದ ಸಣ್ಣ ಉದ್ಯಮ ಆರಂಭಿಸಲು ಈ ಯೋಜನೆಯಡಿ ಬಡ್ಡಿರಹಿತ ಸಾಲ ದೊರೆಯುತ್ತದೆ. ಉದ್ಯೋಗಿನಿ ಯೋಜನೆಯಡಿ ಸಮಾಜದ ಎಲ್ಲ ವರ್ಗಗಳ ಮಹಿಳೆಯರಿಗೆ ಬಡ್ಡಿರಹಿತ ಸಾಲ ನೀಡಲಾಗುತ್ತದೆ. ವಿಧವೆಯರು, ಅಂಗವಿಕಲರು, ನಿರ್ಗತಿಕ ಮಹಿಳೆಯರಿಗೆ ವಿಶೇಷ ಪ್ರಾತಿನಿಧ್ಯ ನೀಡಲಾಗುತ್ತದೆ.

ಸುಮಾರು 88 ವಿಧದ ಸಣ್ಣ ಉದ್ಯಮ ಆರಂಭಿಸಲು ಉದ್ಯೋಗಿನಿ ಯೋಜನೆಯಡಿ ಸಾಲ ಪಡೆಯಬಹುದಾಗಿದೆ. ಇವುಗಳಲ್ಲಿ ಹೊಲಿಗೆ, ಮತ್ಸ್ಯೋದ್ಯಮ, ದಿನಸಿ ಮಾರಾಟ, ಗ್ರಂಥಾಲಯ, ಬೇಕರಿ, ಅಗರಬತ್ತಿ ತಯಾರಿಕೆ, ಡೈರಿ ಹಾಗೂ ಕುಕ್ಕುಟೋದ್ಯಮ ಕೂಡ ಸೇರಿವೆ. ದೇಶದ ಅನೇಕ ಖಾಸಗಿ ಮತ್ತು ಸರ್ಕಾರಿ ಸ್ವಾಮ್ಯದ ಅನೇಕ ಬ್ಯಾಂಕ್​ಗಳು ಉದ್ಯೋಗಿನಿ ಯೋಜನೆಯಡಿ ಸಾಲ ನೀಡುತ್ತಿವೆ. ಪಂಜಾಬ್ ಆಂಡ್ ಸಿಂಧ್ ಬ್ಯಾಂಕ್, ಸಾರಸ್ವತ ಬ್ಯಾಂಕ್​ಗಳಲ್ಲಿಯೂ ಸಾಲ ಪಡೆಯಹುದಾಗಿದೆ. ಇವುಗಳು ಮಾತ್ರವಲ್ಲದೆ ಎಲ್ಲ ವಾಣಿಜ್ಯ ಬ್ಯಾಂಕ್​ಗಳು, ಸಹಕಾರಿ ಬ್ಯಾಂಕ್​ಗಳಿಂದಲೂ ಸಾಲ ಪಡೆಯಬಹುದಾಗಿದೆ.

ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಮಾತ್ರ ಸಾಲ ದೊರೆಯುತ್ತದೆ. 18ರಿಂದ 55 ವರ್ಷಷ ವಯಸ್ಸಿನ ಮಹಿಳೆಯರು ಬಡ್ಡಿರಹಿತ ಸಾಲ ಪಡೆಯಲು ಅರ್ಹರಾಗಿದ್ದಾರೆ. ಸಾಲಕ್ಕೆ ಅರ್ಜಿ ಸಲ್ಲಿಸುವ ಮಹಿಳೆಯ ಕುಟುಂಬದ ಆದಾಯ 1.5 ಲಕ್ಷ ರೂ.ಗಿಂತ ಕಡಿಮೆ ಇರಬೇಕು. ವಿಧವೆಯರು, ಅಂಗವಿಕಲರು, ನಿರ್ಗತಿಕ ಮಹಿಳೆಯರಾದರೆ ಕುಟುಂಬದವರಿಗೆ ಹೆಚ್ಚಿನ ಆದಾಯವಿದ್ದರೂ ಸಾಲ ನೀಡಲು ಪರಿಗಣಿಸಲಾಗುತ್ತದೆ.

ಸಾಲಕ್ಕೆ ಅರ್ಜಿ ಸಲ್ಲಿಸಲು, ಸಂಬಂಧಪಟ್ಟ ಬ್ಯಾಂಕ್​ನ ವೆಬ್​ಸೈಟ್​ನಿಂದ ಉದ್ಯೋಗಿನಿ ಸಾಲದ ಅರ್ಜಿಯ ಪ್ರತಿಯನ್ನು ಡೌನ್​ಲೋಡ್ ಮಾಡಿ. ಅರ್ಜಿಯಲ್ಲಿ ಎಲ್ಲ ವಿವರಗಳನ್ನು ಭರ್ತಿ ಮಾಡಿ, ಬ್ಯಾಂಕ್ ಕೇಳಿರುವ ಎಲ್ಲ ದಾಖಲೆಗಳ ಪ್ರತಿಯನ್ನು ಅರ್ಜಿಯ ಜತೆಗೆ ಲಗತ್ತಿಸಿರಬೇಕು. ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಿದ ಬಳಿಕ ಸಂಬಂಧಪಟ್ಟ ಬ್ಯಾಂಕ್ ಶಾಖೆಗೆ ತೆರಳಿ ಸಾಲ ಮಂಜೂರಾಗಿರುವ ಬಗ್ಗೆ ವಿಚಾರಿಸಿ. ಬ್ಯಾಂಕ್​ ಶಾಖೆಗೆ ಭೇಟಿ ನೀಡಿಯೂ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
*ಆಧಾರ್ ಕಾರ್ಡ್
*ಜನನ ಪ್ರಮಾಣಪತ್ರ
*ಸ್ಥಳೀಯ ಶಾಸಕ ಅಥವಾ ಸಂಸದನ ಲೆಟರ್​ಹೆಡ್ ಇರುವ ಪತ್ರ
*ಬಿಪಿಎಲ್​ ಕಾರ್ಡ್​ನ ಪ್ರತಿ
*ಜಾತಿ ಪ್ರಮಾಣಪತ್ರ
*ಆದಾಯ ಪ್ರಮಾಣಪತ್ರ

You may also like

Leave a Comment