ಚೈತ್ರಾ ಕುಂದಾಪುರ ಅವರ ವಿರುದ್ಧ ಕೋರ್ಟ್ ಆದೇಶ ಬಂದಿದ್ದು, ಸ್ವತಃ ಚೈತ್ರಾ ಕುಂದಾಪುರ ಅವರ ತಂದೆಯೇ ಚೈತ್ರಾ ವಿರುದ್ಧ ಕೇಸ್ ಹಾಕಿದ್ದರು. ಪತ್ನಿ ಹಾಗೂ ಮಗಳಿಂದ ತಮಗೆ ಕಿರುಕುಳ ಆಗುತ್ತಿದೆ ಎಂದು ಚೈತ್ರಾ ಕುಂದಾಪುರ ಅವರ ತಂದೆ ಬಾಲಕೃಷ್ಣ ನಾಯ್ಕ್ ಅವರು ದೂರನ್ನು ನೀಡಿದ್ದರು. ತಮಗೆ ನ್ಯಾಯ ದೊರಕಿಸಿಕೊಡುವಂತೆ ಬಾಲಕೃಷ್ಣ ಅವರು ಹಿರಿಯ ನಾಗರಿಕರ ನ್ಯಾಯಾಲಯದ ಮೊರೆ ಹೋಗಿದ್ದರು. ಈಗ ಚೈತ್ರಾ ಕುಂದಾಪುರ (Chaithra Kundapura) ವಿರುದ್ಧ ಆದೇಶ ಬಂದಿದೆ. ನಿಯಮಾನುಸಾರ ಕ್ರಮ ಕೈಗೊಳ್ಳಲು ಕುಂದಾಪುರ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.
ಬಾಲಕೃಷ್ಣ ನಾಯ್ಕ್ ಅವರಿಗೆ ಯಾವುದೇ ದೈಹಿಕ, ಮಾನಸಿಕ ಕಿರುಕುಳ ನೀಡುವಂತಿಲ್ಲ. ಮನೆಯಲ್ಲಿ ನಿರ್ಭೀತಿಯಿಂದ ವಾಸಿಸಲು ಅನುವು ಮಾಡಿಕೊಡಬೇಕು’ ಎಂದು ನ್ಯಾಯಾಲಯ ಆದೇಶ ನೀಡಿದೆ. ಅಲ್ಲದೇ, ಈ ಬಗ್ಗೆ ಚೈತ್ರಾ ಕುಂದಾಪುರ ಅವರಿಂದ ಸೂಕ್ತ ಮುಚ್ಚಳಿಕೆ ಪಡೆಯುವಂತೆ ಸೂಚಿಸಲಾಗಿದೆ.
ಬಾಲಕೃಷ್ಣ ನಾಯ್ಕ್ ಅವರಿಗೆ ಕರ್ನಾಟಕ ಪೋಷಕರು ಮತ್ತು ಹಿರಿಯ ನಾಗರಿಕರ ಪಾಲನೆ ಮತ್ತು ಕಲ್ಯಾಣ ನಿಯಮಗಳು ಅಡಿಯಲ್ಲಿ ರಕ್ಷಣೆ ನೀಡಲಾಗಿದೆ. ಇದರ ಅನ್ವಯ ಕುಂದಾಪುರ ಪೊಲೀಸರು ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಿದ್ದಾರೆ.
