Home » ನಟಿಯನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಆರೋಪಿ ಕೊನೆಗೂ ಪೊಲೀಸ್ ಅತಿಥಿ !!

ನಟಿಯನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಆರೋಪಿ ಕೊನೆಗೂ ಪೊಲೀಸ್ ಅತಿಥಿ !!

by ಹೊಸಕನ್ನಡ
0 comments

ದಕ್ಷಿಣ ಭಾರತದ ಜನಪ್ರಿಯ ನಟಿ ಪಾರ್ವತಿ ತಿರುವೋತು ಅವರನ್ನು ಹಿಂಬಾಲಿಸಿ ಕಿರುಕುಳ ನೀಡಿದ್ದ ಆರೋಪಿಯನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

ಕೊಲ್ಲಂ ಮೂಲದ ಅಫ್ಸಲ್ (34) ಬಂಧಿತ ಆರೋಪಿ. ನಟಿಗೆ ನಿರಂತರ ಫೋನ್ ಕರೆಗಳ ಮೂಲಕ ಆರೋಪಿಯು ತೊಂದರೆಯನ್ನು ನೀಡುತ್ತಿದ್ದ. ಅಷ್ಟೇ ಅಲ್ಲದೆ ಈತ ಆಹಾರ ಪೊಟ್ಟಗಳನ್ನು ನೀಡಲು ಕೊಚ್ಚಿಯಲ್ಲಿರುವ ನಟಿ ಪಾರ್ವತಿ ನಿವಾಸಕ್ಕೆ ಆಗಾಗ ಬಂದು ಅಲ್ಲಿನ ಭದ್ರತಾ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸುತ್ತಿದ್ದ.

ಕಳೆದ ಕೆಲವು ವರ್ಷಗಳಿಂದ ಫೋನ್ ಸಂದೇಶಗಳ ಮೂಲಕ ನಟಿಗೆ ತೊಂದರೆ ನೀಡುತ್ತಿದ್ದನು. ಇದರ ಬೆನ್ನಲ್ಲೇ ನಟಿ ಎರ್ನಾಕುಲಂನ ಮರಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಇದೀಗ ಆರೋಪಿ ಅಫ್ಸಲ್‌ ಪೊಲೀಸರ ಅತಿಥಿಯಾಗಿದ್ದಾನೆ.

ನಟಿ ಪಾರ್ವತಿ ಅವರು ಕನ್ನಡದಲ್ಲೂ ನಟಿಸಿದ್ದರು. ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಜೊತೆ ‘ಮಿಲನ’ ಹಾಗೂ ‘ಪೃಥ್ವಿ’ ಸಿನಿಮಾದಲ್ಲಿ ನಾಯಕಿಯಾಗಿ ತೆರೆ ಹಂಚಿಕೊಂಡಿದ್ದರು. ಅದಲ್ಲದೆ ‘ಮಳೆ ಬರಲಿ ಮಂಜು ಇರಲಿ’, ‘ಅಂದರ್ ಬಾಹರ್’ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.

You may also like

Leave a Comment