Kantara Chapter 1: ಕಾಂತಾರ ಚಾಪ್ಟರ್ 1 (Kantara Chapter 1), ಇದೇ ಅಕ್ಟೋಬರ್ 2 ರಂದು ವಿಶ್ವದಾದ್ಯಂತ ತೆರೆಗೆ ಬರಲು ಸಿದ್ಧವಾಗಿದೆ. ರಿಷಬ್ ಶೆಟ್ಟಿ (Rishab Shetty) ಅವರು ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ (Hombale Films) ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ್ದಾರೆ.
ಆಸ್ಟ್ರೇಲಿಯಾ (Australia) ಮತ್ತು ನ್ಯೂಜಿಲೆಂಡ್‌ನಲ್ಲಿನ (New Zealand) ವೀಕ್ಷಕರಿಗಾಗಿ ಈ ಚಿತ್ರವನ್ನು ಡ್ರೀಮ್ ಸ್ಕ್ರೀನ್ಸ್ ಇಂಟರ್‌ನ್ಯಾಷನಲ್ ವಿತರಿಸಲಿದ್ದು, ಅಲ್ಲಿನ ಸಿನಿಪ್ರಿಯರು ಈ ದೈವಿಕ ಕಥೆಯನ್ನು ದೊಡ್ಡ ಪರದೆಯ ಮೇಲೆ ಕಣ್ತುಂಬಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ:Darshan: ದಯಮಾಡಿ ನನಗೆ ವಿಷ ಕೊಡಿ: ಜಡ್ಜ್ ಮುಂದೆ ದರ್ಶನ್ ಮನವಿ
ಒಟ್ಟಿನಲ್ಲಿ ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಬೆಂಗಾಲಿ ಮತ್ತು ಇಂಗ್ಲಿಷ್ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿರುವ ಈ ಚಿತ್ರವು ಭಾರತೀಯ ಹಾಗೂ ಜಾಗತಿಕ ಸಿನಿಪ್ರಿಯರಿಗೆ ಒಂದು ಅದ್ಭುತ ಅನುಭವ ನೀಡಲಿದೆ.
