Home » Lawyer Jagadeesh: ‘ಸಾವಿನಲ್ಲೂ ವಿಕೃತಿ ಮೆರಿತಿಯಲ್ಲೋ’ – ನಟ ಜಗ್ಗೇಶ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಲಾಯರ್ ಜಗದೀಶ್!!

Lawyer Jagadeesh: ‘ಸಾವಿನಲ್ಲೂ ವಿಕೃತಿ ಮೆರಿತಿಯಲ್ಲೋ’ – ನಟ ಜಗ್ಗೇಶ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಲಾಯರ್ ಜಗದೀಶ್!!

541 comments

Lawyer Jagadish : ಸ್ಯಾಂಡಲ್‌ವುಡ್‌ ನಿರ್ದೇಶಕ, ನಟ ಮಠ ಗುರುಪ್ರಸಾದ್‌ ಅವರು ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬೆನ್ನಲ್ಲೇ ಗುರುಪ್ರಸಾದ್ ಬಗ್ಗೆ ನಟ, ನವರಸ ನಾಯಕ ಜಗ್ಗೇಶ್(Jaggesh ) ಗುರುಪ್ರಸಾದ್(Guruprasad) ವಿರುದ್ಧ ಕೆಲವೊಂದು ಸ್ಫೋಟಕ ಮಾಹಿತಿ ಹೊರ ಹಾಕಿದ್ದಾರೆ. ಅಲ್ಲದೆ ಗುರುಪ್ರಸಾದ್ ವಿರುದ್ಧ ಕೆಲವೊಂದು ಗಂಭೀರ ಆರೋಪಗಳನ್ನು ಕೂಡ ಮಾಡಿದ್ದಾರೆ. ಈ ಬೆನ್ನಲ್ಲೇ ಜಗ್ಗೇಶ್ ವಿರುದ್ಧ ಕೆಲವು ಸ್ಯಾಂಡಲ್ವುಡ್ ನಟರು ಕಿಡಿ ಕಾರಿದ್ದಾರೆ. ಅಂತಯೇ ಇದೀಗ ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್( lawyer Jagadish) ಕೂಡ ಜಗ್ಗೇಶ್ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

ಹೌದು ವಿಡಿಯೋ ಮೂಲಕ ಜಗ್ಗೇಶ್ ವಿರುದ್ಧ ಹರಿಹಾಯಿದಿರುವ ಲಾಯರ್ ಜಗದೀಶ್ ಅವರು ‘ವಾವ್ ಜಗ್ಗೇಶ್ ಸತ್ತ ವ್ಯಕ್ತಿ ಬಗ್ಗೆ ಎಂತಹಾ ವಿಶ್ಲೇಷಕ ಕೃತಿಯನ್ನು ಕೊಟ್ಟೆ. ಸಾವಿನಲ್ಲೂ ವಿಕೃತಿ ಕಾಣಬಹುದಾಗಿದೆ ಎಂಬುದನ್ನು ನಿನ್ನಿಂದ ಕಲಿಯಬೇಕಾಗಿದೆ. ಸಂಸ್ಕೃತಿಯೇ ಅದೇ ರೀತಿ ಇದೆಯೋ ಅಥವಾ ನಿನ್ನ ಮನಸ್ಥಿತಿಯೇ ಅಷ್ಟು ವಿಕೃತವಾಗಿದೆಯೋ ನನಗೆ ಗೊತ್ತಿಲ್ಲ. ಗುರುಪ್ರಸಾದ್‌ಗೆ ಕೆರೆತ ಇತ್ತಾ? ಕೀವು, ರಕ್ತ ಬರುತ್ತಿತ್ತಾ, ಎಂಥ ಮನುಷ್ಯ ನೀನು, ಯಾವ ರೀತಿಯಲ್ಲಿ ಮನುಷ್ಯ ಎನ್ನಬೇಕೋ ತಿಳಿಯುತ್ತಿಲ್ಲ. ನಿನ್ನನ್ನು ನೀನು ರಾಘವೇಂದ್ರರ ಭಕ್ತ ಅಂತ ಹೇಳೀಯ. ರಾಘವೇಂದ್ರನ ಭಕ್ತನಾಗಿ, ನಿನಗೆ ಲೈಫ್ ಕೊಟ್ಟ ಡೈರೆಕ್ಟರ್ ಬಗ್ಗೆ ಈ ರೀತಿ ಮಾತಾಡ್ತೀಯ. ‘ಮಠ’ ಸಿನಿಮಾದಲ್ಲಿ ಗುರುಪ್ರಸಾದ್ ನಿನಗೆ ಲೈಫ್ ಕೊಟ್ಟ. ಜಗ್ಗೇಶ್ ಯಾರು ಅಂತ ಇಡೀ ಕರ್ನಾಟಕ ಮರೆತುಹೋಗಿತ್ತು. ಸಾವಿನಲ್ಲೂ ವಿಕೃತಿ ಕಾಣುವಂತಹ ವ್ಯಕ್ತಿ ನೀನು ಎಂಬುದು ನನಗೆ ಗೊತ್ತಿರಲಿಲ್ಲ’ ಎಂದಿದ್ದಾರೆ.

ಅಲ್ಲದೆ ‘ನೀನು ಮರೆತು ಹೋಗಿದ್ದೀಯ. 25 ವರ್ಷದ ಹಿಂದೆ ಯಾವನಿಗೋ 5 ಲಕ್ಷ ರೂಪಾಯಿ ಕೊಡಬೇಕು ಅಂತ ಹನುಮಂತೇಗೌಡರನ್ನು ಕರೆದುಕೊಂಡು ನಮ್ಮ ಆಫೀಸ್‌ಗೆ ಬಂದೆ. ಆವತ್ತು ನಾನು ನಿನ್ನ ರೈಟ್ ಹೇಳು ಅಂದೆ. ನೀನೇನು ರೌಡಿನಾ, ಅವತ್ತೇ ನಿನ್ನ ಯೋಗ್ಯತೆ ಗೊತ್ತಾಯಿತು. ಗುರುಪ್ರಸಾದ್ ಬಗ್ಗೆ ನೀನು ಆಡಿದ ಮಾತು ನನಗಂತೂ ಜೀರ್ಣ ಆಗಿಲ್ಲ. ನಿನ್ನ ಮತ್ತು ಅಶೋಕನ ಡೀಲ್ ನನಗೆ ಚೆನ್ನಾಗಿ ಗೊತ್ತು. ಕಾಲಾಯ ತಸ್ಮಯ ನಮಃ. ಇಂದು ಗುರುಪ್ರಸಾದ್ ಮನೆಯ ಬಾಗಿಲಲ್ಲಿ ಇದ್ದ ಯಮ ನಾಳೆ ಯಾರ ಮನೆಗೆ ಬೇಕಾದರೂ ಬರಬಹುದು. ಕಾದು ನೋಡೋಣ ಎಂದು ನಟ ಜಗ್ಗೇಶ್ (jaggesh) ವಿರುದ್ಧ ಏಕವಚನದಲ್ಲೇ ಜಗದೀಶ್ (Jagadish) ವಾಗ್ದಾಳಿ ನಡೆಸಿದ್ದಾರೆ.

You may also like

Leave a Comment