Home » ಕನ್ನಡದ “ಲವ್ ಯು ರಚ್ಚು” ಸಿನಿಮಾ ಶೂಟಿಂಗ್ ವೇಳೆ ನಡೆದ ದುರಂತ | ಹೈಟೆನ್ಷನ್ ವೈರ್ ತಗುಲಿ ಫೈಟರ್ ಸ್ಥಳದಲ್ಲೇ ಸಾವು

ಕನ್ನಡದ “ಲವ್ ಯು ರಚ್ಚು” ಸಿನಿಮಾ ಶೂಟಿಂಗ್ ವೇಳೆ ನಡೆದ ದುರಂತ | ಹೈಟೆನ್ಷನ್ ವೈರ್ ತಗುಲಿ ಫೈಟರ್ ಸ್ಥಳದಲ್ಲೇ ಸಾವು

by ಹೊಸಕನ್ನಡ
0 comments

ಕನ್ನಡದ “ಲವ್ ಯು ರಚ್ಚು” ಸಿನಿಮಾ ಚಿತ್ರೀಕರಣದ ವೇಳೆ ದುರಂತ ಸಂಭವಿಸಿದ್ದು, ಹೈಟೆನ್ಷನ್ ವೈರ್ ತಗುಲಿ ಫೈಟರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

35 ವರ್ಷದ ವಿವೇಕ್ ಮೃತ ಫೈಟರ್ ಎಂದು ತಿಳಿದುಬಂದಿದೆ.

ಅಜಯ್ ರಾವ್ ಮತ್ತು ರಚಿತಾ ರಾಮ್ ಅಭಿನಯಿಸುತ್ತಿರುವ ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣ ಬಿಡದಿಯ ಈಗಲ್‍ಟನ್ ರೆಸಾರ್ಟ್ ಬಳಿ ನಡೆಯುತ್ತಿತ್ತು. ಈ ವೇಳೆ ವಿದ್ಯುತ್ ಅವಘಡ ಸಂಭವಿಸಿ, ಇಬ್ಬರ ಸ್ಥಿತಿ ಗಂಭೀರವಾಗಿತ್ತು. ಈ ಪೈಕಿ ಫೈಟರ್ ತಮಿಳುನಾಡು ಮೂಲದ ವಿವೇಕ್ ಮೃತಪಟ್ಟಿದ್ದು, ಮತ್ತೊಬ್ಬನಿಗೆ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ.

ಚಿತ್ರೀಕರಣದ ವೇಳೆ ಮೆಟಲ್ ರೋಪ್ ಬಳಸಿದ್ದೇ ಅವಘಡಕ್ಕೆ ಕಾರಣ. ರೋಪ್ ಹೈಟೆನ್ಷ್ ನ್ ತಂತಿಗೆ ತಾಗಿ ದುರಂತ ಸಂಭವಿಸಿದೆ ಎನ್ನಲಾಗಿದೆ. ಅವಘಡ ಸಂಭವಿಸುತ್ತದ್ದಂತೆಯೇ ಚಿತ್ರೀಕರಣ ನಿಲ್ಲಿಸಲಾಗಿದೆ.

ಕಳೆದ ಐದು ದಿನಗಳಿಂದ ಸಾಹಸ ದೃಶ್ಯದ ಚಿತ್ರೀಕರಣ ನಡೆಯುತ್ತಿತ್ತು. ಫೈಟ್ ಮಾಸ್ಟರ್ ವಿನೋದ್ ಸಾಹಸ ನಿರ್ದೇಶನದಲ್ಲಿ ಚಿತ್ರೀಕರಣ ನಡೆಯುತ್ತಿತ್ತು.

ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಫೈಟ್ ಮಾಸ್ಟರ್ ವಿನೋದ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

You may also like

Leave a Comment