Home » ಮಲಯಾಳಂನ ಖ್ಯಾತ ಕಿರುತೆರೆ ನಟ ರಮೇಶ್ ವಲಿಯಸಲಾ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಮಲಯಾಳಂನ ಖ್ಯಾತ ಕಿರುತೆರೆ ನಟ ರಮೇಶ್ ವಲಿಯಸಲಾ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

by Praveen Chennavara
0 comments

ಮಲಯಾಳಂನ ಖ್ಯಾತ ಕಿರುತೆರೆ ನಟ ರಮೇಶ್ ವಲಿಯಸಲಾ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ತಿರುವನಂತಪುರಂನಲ್ಲಿರುವ ಮನೆಯಲ್ಲಿ ಶನಿವಾರ (ಸೆ.11) ಮುಂಜಾನೆ 6.30 ರ ಸುಮಾರಿಗೆ ರಮೇಶ್ ವಲಿಯಸಲಾ ಅವರ ಮೃತದೇಹ ಸಿಲ್ಲಿಂಗ್ ಪ್ಯಾನ್‍ಗೆ ನೇಣು ಬಿಗಿದ ಸ್ಥಿತಿಯಲ್ಲಿದ್ದನ್ನು ನೋಡಿ ಶಾಕ್ ಆದ ಆತನ ಪತ್ನಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಇದೊಂದು ಅಸ್ವಾಭಾವಿಕ ಸಾವು ಎಂದು ಪರಿಗಣಿಸಿ ಸೆಕ್ಷನ್ 174ರಡಿ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ.

ಕೋವಿಡ್ ಲಾಕ್ ಡೌನ್ ನಲ್ಲಿ ರಮೇಶ್ ಅವರು ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದರು. ಇದೆ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ.

You may also like

Leave a Comment