Home » ರಾಷ್ಟ್ರ ಮಟ್ಟದ ತ್ರೋಬಾಲ್ ಪಂದ್ಯಾಟ : ಬೆಳ್ತಂಗಡಿ ಬಂದಾರಿನ ಭರತೇಶ್ ಗೌಡ ಕರ್ನಾಟಕ ತಂಡಕ್ಕೆ ಆಯ್ಕೆ

ರಾಷ್ಟ್ರ ಮಟ್ಟದ ತ್ರೋಬಾಲ್ ಪಂದ್ಯಾಟ : ಬೆಳ್ತಂಗಡಿ ಬಂದಾರಿನ ಭರತೇಶ್ ಗೌಡ ಕರ್ನಾಟಕ ತಂಡಕ್ಕೆ ಆಯ್ಕೆ

by Praveen Chennavara
0 comments

ಬೆಳ್ತಂಗಡಿ : ಅ.29ರಿಂದ ಅ.31ರವೆಗೆ ಹರಿಯಾಣ ವಿ.ವಿಯಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ತ್ರೋಬಾಲ್ ಪಂದ್ಯಾವಳಿಯ ಕರ್ನಾಟಕ ತಂಡದಲ್ಲಿ ಬಂದಾರು ಗ್ರಾಮದ ಮೈರೋಲ್ತಡ್ಕ ನಿವಾಸಿ ಭರತೇಶ್ ಗೌಡ ಸ್ಥಾನ ಪಡೆದುಕೊಂಡಿದ್ದಾರೆ.

ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪೂರೈಸಿರುವ ಇವರು, ಪ್ರಸ್ತುತ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

ಕ್ರೀಡೆಯಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು ತಮ್ಮ ವಿದ್ಯಾಭ್ಯಾಸದ ಸಂದರ್ಭದಲ್ಲೂ ತ್ರೋಬಾಲ್ ನಲ್ಲಿ ಉತ್ತಮ ಪ್ರದರ್ಶನದೊಂದಿಗೆ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದು, ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿ ಊರಿಗೆ, ಹೆತ್ತವರಿಗೆ ಕೀರ್ತಿ ತಂದಿರುತ್ತಾರೆ.

ಇವರು ಬಂದಾರು ಗ್ರಾಮದ ಮೈರೋಳಡ್ಕದ ನೆಲ್ಲಿದಕಂಡ ನಿವಾಸಿ ಬೊಮ್ಮಣ್ಣ ಗೌಡ ಮತ್ತು ಚೆಲುವಮ್ಮ ದಂಪತಿ ಪುತ್ರ.

You may also like

Leave a Comment