2
ಟೋಕಿಯೊದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ನ ಹಾಕಿ ಪಂದ್ಯಾಟದಲ್ಲಿ ಪುರುಷರ ಹಾಕಿ ತಂಡವು 41 ವರ್ಷಗಳ ಬಳಿಕ ಕಂಚಿನ ಪದಕವನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡಿದೆ.
ಜರ್ಮನಿ ವಿರುದ್ಧ 5-4 ಅಂತರದಲ್ಲಿ ಭಾರತದ ಪುರುಷರ ಹಾಕಿ ತಂಡ ಗೆದ್ದು, ಪದಕ ತನ್ನದಾಗಿಸಿಕೊಂಡಿದೆ.
ಆರಂಭದಲ್ಲಿ 1-3 ಹಿನ್ನಡೆ ಅನುಭವಿಸಿದ್ದ ಮನ್‌ಪ್ರೀತ್ ಸಿಂಗ್ ನಾಯಕತ್ವದ ಭಾರತ ಪುರುಷರ ಹಾಕಿ ತಂಡ, ನಂತರ ಭರ್ಜರಿಯಾಗಿ ಆಟವಾಡಿ 5-4 ಅಂತರದಲ್ಲಿ ರೋಚಕ ಗೆಲುವು ಸಾಧಿಸಿದೆ.
ಈ ಕಂಚಿನ ಪದಕ ಗೆಲ್ಲುವುದರ ಮೂಲಕ ಭಾರತ ಈ ಒಲಿಂಪಿಕ್ಸ್ ನಲ್ಲಿ ಒಟ್ಟು 4 ಪದಕಗಳನ್ನು ತನ್ನದಾಗಿಸಿಕೊಂಡಿದೆ.
