Home » Puneeth Rajkumar: ಪುನೀತ್ 4ನೇ ಪುಣ್ಯಸ್ಮರಣೆ: ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ

Puneeth Rajkumar: ಪುನೀತ್ 4ನೇ ಪುಣ್ಯಸ್ಮರಣೆ: ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ

0 comments

Puneeth Rajkumar: ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ (Puneeth Rajkumar) ಅವರ 4ನೇ ಪುಣ್ಯಸ್ಮರಣೆ ಹಿನ್ನೆಲೆ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಸೇರಿದಂತೆ ದೊಡ್ಮನೆ ಕುಟುಂಬದವರು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಕಂಠೀರವ ಸ್ಟುಡಿಯೋಕ್ಕೆ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್, ಶಿವರಾಜಕುಮಾರ್‌ ರಾಘಣ್ಣ ದಂಪತಿ, ಯುವ ರಾಜ್‌ಕುಮಾರ್, ವಿನಯ್ ರಾಜ್‌ಕುಮಾರ್ ಸೇರಿದಂತೆ ಕುಟುಂಬಸ್ಥರು ಆಗಮಿಸಿ, ಪೂಜೆಗೆ ಸಿದ್ಧತೆ ಮಾಡಿಕೊಂಡು ಬಳಿಕ ಅಪ್ಪುಗೆ ಇಷ್ಟವಾದ ತಿನಿಸುಗಳನ್ನಿಟ್ಟು ಪೂಜೆ ನೆರವೇರಿಸಿದ್ದಾರೆ.

ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ ಬಳಿಕ ಕುಟುಂಬಸ್ಥರು ಪಾರ್ವತಮ್ಮ ಹಾಗೂ ಡಾ. ರಾಜ್‌ಕುಮಾರ್ ಸಮಾಧಿಗೆ ಪೂಜೆ ಮಾಡಿದ್ದಾರೆ.

ಪುನೀತ್ ಸಮಾಧಿಗೆ ಬಿಳಿ ಗುಲಾಬಿ ಹೂವುಗಳಿಂದ ಅಲಂಕಾರ ಮಾಡಲಾಗಿದ್ದು, ಇಂದು ಇಡೀ ದಿನ ಕಂಠೀರವ ಸ್ಟುಡಿಯೋದಲ್ಲಿ ಅನ್ನಸಂತರ್ಪಣೆ ಹಾಗೂ ರಕ್ತದಾನ, ನೇತ್ರದಾನ ಶಿಬಿರವನ್ನು ಅಭಿಮಾನಿಗಳು ಅಯೋಜಿಸಿದ್ದಾರೆ.

You may also like