Home » BBK11: ಬಿಗ್‌ಬಾಸ್‌ ಮನೆಯಿಂದ ಹೊರಬರಲು ನಿಜವಾದ ಕಾರಣ ತಿಳಿಸಿದ ಶೋಭಾ ಶೆಟ್ಟಿ

BBK11: ಬಿಗ್‌ಬಾಸ್‌ ಮನೆಯಿಂದ ಹೊರಬರಲು ನಿಜವಾದ ಕಾರಣ ತಿಳಿಸಿದ ಶೋಭಾ ಶೆಟ್ಟಿ

0 comments

BBK 11: ಬಿಗ್‌ಬಾಸ್‌ ಕನ್ನಡ ಸೀಸನ್‌ 11 ಗೆ ವೈಲ್ಡ್‌ ಕಾರ್ಡ್‌ ಎಂಟ್ರಿ ಮೂಲಕ ಪ್ರವೇಶ ಮಾಡಿದ ಶೋಭಾ ಶೆಟ್ಟಿ ತಮ್ಮ ಅನಾರೋಗ್ಯದ ಕಾರಣ ನೀಡಿ ದೊಡ್ಮನೆಯಿಂದ ಹೊರ ಹೋಗಿದ್ದಾರೆ. ಕಳೆದ ಎರಡು ದಿನಗಳಿಂದ ಈ ವಿಷಯ ವೀಕ್ಷಕರ ಮನದಲ್ಲಿ ಓಡಾಡುತ್ತಿದ್ದು, ಬಂದ ಎರಡು ದಿನ ಭಾರೀ ಸೌಂಡ್‌ ಮಾಡಿದ ಶೋಭಾ, ನಂತರ ತಮ್ಮ ಆಟವನ್ನು ಸ್ಲೋ ಮಾಡಿದ್ದರು. ಆದರೆ ಏಕಾಏಕಿ ಮನೆಯಿಂದ ಹೊರಹೋಗುವ ನಿರ್ಧಾರ ಮಾಡಿದ್ದು ಯಾಕೆ ಎಂದು?

ಇದೀಗ ಮನೆಯಿಂದ ಹೊರಬಂದಿರುವ ಶೋಭಾ ಶೆಟ್ಟಿ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.

ನನ್ನ ಪ್ರೀತಿಯ ಕನ್ನಡಿಗರೇ, ನನ್ನ ಬಿಗ್ ಬಾಸ್ ಪಯಣ ಮುಗಿದಿದೆ. ಆಟದ ಮೇಲೆ ಗಮನ ಕೊಡಲು ಆರೋಗ್ಯ ಸಹಕರಿಸುತ್ತಿಲ್ಲ, ಮುನ್ನಡೆಯುವ ಇಚ್ಛೆಯಿದ್ದರೂ ದೇಹ ಮುಂದುವರಿಯಲು ಬಿಡುತ್ತಿಲ್ಲ.. ಯಾರನ್ನೂ ಯಾವುದನ್ನೂ ನಾನು ಹಗುರವಾಗಿ ತೆಗೆದುಕೊಂಡಿಲ್ಲ, ಜೀವನದ ಜವಬ್ದಾರಿಗಳಿಗೆ ಆರೋಗ್ಯವನ್ನು ಕಾಪಾಡಿಕೊಂಡು ಮುನ್ನಡೆಯುವ ಸಲುವಾಗಿ ನನ್ನ ಈ ನಿರ್ಧಾರ!

ಇದೆಲ್ಲದರ ಮಧ್ಯೆ ನೀವು ತೋರಿಸಿದ ಪ್ರೀತಿ ಮತ್ತು ಬೆಂಬಲಕ್ಕೆ ನಾನು ಅಭಾರಿಯಾಗಿದ್ದೀನಿ, ತಿಳಿದೋ ತಿಳಿಯದೆಯೋ ನನ್ನಿಂದ ಯಾರಿಗಾದರೂ ಬೇಸರವಾಗಿದ್ದರೆ ದಯವಿಟ್ಟು ಕ್ಷಮಿಸಿ. ನನ್ನ ಜನರಿಗೆ, ಕಲರ್ಸ್ ಕನ್ನಡ ತಂಡಕ್ಕೆ, ಹಾಗು ನನ್ನ ಪ್ರೀತಿಯ ಕಿಚ್ಚ

ಸುದೀಪ್ ಸರ್ ನಿಮಗೆ ಧನ್ಯವಾದಗಳು. ಹೊಸ ಹುರುಪಿನೊಂದಿಗೆ ನಿಮ್ಮನ್ನು ರಂಜಿಸಲು, ನಿಮ್ಮ ಪ್ರೀತಿಯನ್ನು ಮತ್ತೆ ಪಡೆಯಲು ಮತ್ತೊಂದು ರೂಪದಲ್ಲಿ ಮತ್ತೆ ನಿಮ್ಮ ಮುಂದೆ ಖಂಡಿತಾ ನಾನು ಬರುವೆ.

ಇಂತಿ ನಿಮ್ಮ ಪ್ರೀತಿಯ, ಶೋಭಾ ಶೆಟ್ಟಿ

You may also like

Leave a Comment