Home » Sports Minister Anurag Thakur: ಕ್ರೀಡಾಪಟುಗಳಿಗೆ ಸಂತಸದ ಸುದ್ದಿ : ಇನ್ಮುಂದೆ ಖೇಲೋ ಇಂಡಿಯಾ ಪದಕ ಗೆದ್ದವರಿಗೂ ಸರ್ಕಾರಿ ನೌಕರಿ : ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಘೋಷಣೆ

Sports Minister Anurag Thakur: ಕ್ರೀಡಾಪಟುಗಳಿಗೆ ಸಂತಸದ ಸುದ್ದಿ : ಇನ್ಮುಂದೆ ಖೇಲೋ ಇಂಡಿಯಾ ಪದಕ ಗೆದ್ದವರಿಗೂ ಸರ್ಕಾರಿ ನೌಕರಿ : ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಘೋಷಣೆ

4 comments
Sports Minister Anurag Thakur

ಖೇಲೋ ಇಂಡಿಯಾ ಕ್ರೀಡಾ ಕೂಟಗಳಲ್ಲಿ ಪದಕ ಗೆಲ್ಲುವ ಅಥ್ಲೀಟ್‌ಗಳಿಗೆ ಇನ್ನು ಮುಂದೆ ಸರ್ಕಾರಿ ಹುದ್ದೆ ಪಡೆಯುವುದಕ್ಕೆ ಅರ್ಹರು ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.

ಇದನ್ನೂ ಓದಿ: Ram Mandir Webhack: 264 ಸರ್ಕಾರಿ ವೆಬ್ಸೈಟ್ ಹ್ಯಾಕ್ ಮಾಡಲು ಯತ್ನ : ಪಾಕ್, ಚೀನಾ ಹ್ಯಾಕರ್ ಗಳ ಸಂಚು

ಬುಧವಾರ ಅನುರಾಗ್ ಠಾಕೂರ್ ‘ಅತ್ಯುತ್ತಮ ಕ್ರೀಡಾ ವ್ಯವಸ್ಥೆ, ತಳಮಟ್ಟದಲ್ಲೇ ಪ್ರತಿಭೆಗಳನ್ನು ಪೋಷಿಸುವುದು ಪ್ರಧಾನಿ ಮೋದಿ ಅವರ ಕನಸು. ಇದಕ್ಕೆ ಅನುಗುಣವಾಗಿ ಖೇಲೋ ಇಂಡಿಯಾದ ಯೂತ್, ಯುನಿವರ್ಸಿಟಿ, ಪ್ಯಾರಾ ಹಾಗೂ ಚಳಿಗಾಲದ ಕ್ರೀಡಾಕೂಟಗಳಲ್ಲಿ ಪದಕ ಗೆದ್ದವರು ಇನ್ನು ಮುಂದೆ ಸರ್ಕಾರಿ ಹುದ್ದೆಗೆ ಅರ್ಹತೆ ಪಡೆಯಲಿದ್ದಾರೆ ಎಂದು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಸಿಬ್ಬಂದಿ ಹಾಗೂ ತರಬೇತಿ ಇಲಾಖೆಯು ಕ್ರೀಡಾ ಸಚಿವಾಲಯದೊಂದಿಗೆ ಸಮಾಲೋಚಿಸಿ ಕ್ರೀಡಾಪಟುಗಳು ಸರ್ಕಾರಿ ಉದ್ಯೋಗ ಪಡೆಯಲು ಎದುರು ನೋಡುತ್ತಿರುವವರಿಗೆ ಈ ಪರಿಷ್ಕೃತ ಆದೇಶ ಸಹಾಯಕವಾಗಲಿದೆ ಎಂದು ಠಾಕೂರ್ ತಿಳಿಸಿದ್ದಾರೆ.

You may also like

Leave a Comment