Home » ಮಂಗಳೂರು : ಹಿಜಾಬ್ ಧರಿಸಿ ತರಗತಿಗೆ ಬಂದ 6 ವಿದ್ಯಾರ್ಥಿನಿಯರ ಅಮಾನತು

ಮಂಗಳೂರು : ಹಿಜಾಬ್ ಧರಿಸಿ ತರಗತಿಗೆ ಬಂದ 6 ವಿದ್ಯಾರ್ಥಿನಿಯರ ಅಮಾನತು

0 comments

ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ತರಗತಿ ಪ್ರವೇಶಿಸಿದ 6 ವಿದ್ಯಾರ್ಥಿನಿಯರನ್ನು ಕಾಲೇಜು ಉಪನ್ಯಾಸಕರ ಸಭೆಯ ಒಮ್ಮತದ ತೀರ್ಮಾನದಂತೆ ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ್ದಾರೆ.

ಇನ್ನು ಕಾಲೇಜಿನಲ್ಲಿ ಒಂದು ಕೋಮಿನ ವಿದ್ಯಾರ್ಥಿನಿಯರನ್ನು ಇನ್ನೊಂದು ಕೋಮಿನ ವಿದ್ಯಾರ್ಥಿಗಳು ಚುಡಾಯಿಸಿದಾಗ ಆಕ್ಷೇಪಿಸಿದ ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿದ್ದು, ತಕ್ಷಣವೇ ಕಾಲೇಜಿಗೆ ಪೊಲೀಸರು ದೌಡಾಯಿಸಿ ಘರ್ಷಣೆ ನಿರತ ವಿದ್ಯಾರ್ಥಿಗಳನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ

You may also like

Leave a Comment