Home » Karnataka Rain : ಕರಾವಳಿ ಸೇರಿದಂತೆ ಹಲವು ಕಡೆ ಇಂದು ಭಾರೀ ಮಳೆ | ಯೆಲ್ಲೋ ಅಲರ್ಟ್ ಘೋಷಣೆ!!!

Karnataka Rain : ಕರಾವಳಿ ಸೇರಿದಂತೆ ಹಲವು ಕಡೆ ಇಂದು ಭಾರೀ ಮಳೆ | ಯೆಲ್ಲೋ ಅಲರ್ಟ್ ಘೋಷಣೆ!!!

by Mallika
0 comments

ಕಳೆದ ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮಳೆ ಮತ್ತೆ ಹೆಚ್ಚಾಗಲು ಆರಂಭಿಸಿದೆ‌. ಗುರುವಾರ ಸಂಜೆಯಿಂದಲೇ ಬೆಂಗಳೂರಿನ ಹಲವೆಡೆ ಮಳೆ ಶುರುವಾಗಿದೆ. ಅಷ್ಟು ಮಾತ್ರವಲ್ಲದೇ ಬೆಂಗಳೂರು ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆಯಾಗಲಿದೆ. ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದ್ದು, ಒಟ್ಟು 8 ಜಿಲ್ಲೆಗಳಿಗೆ ಹಳದಿ ಅಲರ್ಟ್ (Yellow Alert) ನೀಡಲಾಗಿದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಿಂಚು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ನವೆಂಬರ್ 13 ಮತ್ತು 14ರಂದು ಮಳೆಯಾಗಲಿದೆ.

ಬೆಂಗಳೂರು ಸೇರಿದಂತೆ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ಹಾಸನ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಬೀಳಲಿದೆ. ಹಾಗೂ ನವೆಂಬರ್ 14 ರಂದು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನಾದ್ಯಂತ ಒಣ ಹವೆ ಮುಂದುವರಿಯಲಿದೆ. ಈ ಭಾಗದಲ್ಲಿ ಮಳೆ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲ್ಲ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ

You may also like

Leave a Comment