Home » Crime: ಅತ್ಯಾಚಾರವೆಸಗಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಬಂದು ಮತ್ತದೇ ಬಾಲಕಿಯನ್ನು ಅಪಹರಿಸಿದ ಕಾಮುಕ!

Crime: ಅತ್ಯಾಚಾರವೆಸಗಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಬಂದು ಮತ್ತದೇ ಬಾಲಕಿಯನ್ನು ಅಪಹರಿಸಿದ ಕಾಮುಕ!

by ಕಾವ್ಯ ವಾಣಿ
0 comments
Kodagu

Crime: ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಬಂದ ವ್ಯಕ್ತಿ ಮತ್ತದೇ ಹುಡುಗಿಯಯನ್ನು ಅಪಹರಿಸಿರುವ ಘಟನೆ (Crime) ಉತ್ತರ ಪ್ರದೇಶದಲ್ಲಿ ನಡೆದಿದೆ.

ಕಳೆದ ವರ್ಷ ಅಪ್ರಾಪ್ತ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ವ್ಯಕ್ತಿಯೊಬ್ಬ ಮತ್ತದೇ ಬಾಲಕಿಯನ್ನು ಅಪಹರಿಸಿದ್ದಾನೆ. ಇದೀಗ ಆರೋಪಿಯನ್ನು ಬಂಧಿಸಲು ಮತ್ತು 15 ವರ್ಷದ ಬಾಲಕಿಯನ್ನು ರಕ್ಷಿಸಲು ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಕಳೆದ ತಿಂಗಳಷ್ಟೇ ಅದೇ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅವನಿಗೆ ಜಾಮೀನು ಸಿಕ್ಕಿದೆ. ಕುಟುಂಬ ಸದಸ್ಯರ ದೂರಿನ ಆಧಾರದ ಮೇಲೆ, ನಾವು ಸರೋಜ್, ಅವರ ಪೋಷಕರು ಮತ್ತು ಪುರುಷ ಸಂಬಂಧಿಯ ವಿರುದ್ಧ ಅಪಹರಣದ ಎಫ್‌ಐಆರ್ ದಾಖಲಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

You may also like