4
Chitradurga: ಕೆಎಸ್‌ಆರ್‌ಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವಿಗೀಡಾದ ಘಟನೆ ನಡೆದಿದೆ. ಚಿತ್ರದುರ್ಗದಲ್ಲಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವಿಗೀಡಾಗಿದ್ದು, ಮೃತ ವಿದ್ಯಾರ್ಥಿಗಳು ಯಾಸೀನ್ ಮತ್ತು ಅಲ್ತಾಫ್ ಎಂದು ಗುರುತಿಸಲಾಗಿದೆ.
ಚಿತ್ರದುರ್ಗ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ಪೋಸ್ಟ್‌ಮಾರ್ಟಮ್ ಮಾಡಲು ಕಳುಹಿಸಲಾಗಿರುವ ಕುರಿತು ವರದಿಯಾಗಿದೆ.
