4
Actress Ranya Rao: ಅಕ್ರಮ ಚಿನ್ನ ಸಾಗಾಣೆ ಪ್ರಕರಣದಲ್ಲಿ ಬಂಧಿತಳಾಗಿರುವ ನಟಿ ರನ್ಯಾ ರಾವ್ ಪ್ರಕರಣದಲ್ಲಿ ಇದೀಗ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಎಂಟ್ರಿ ಆಗಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ತನಿಖೆ ಪ್ರಾರಂಭ ಮಾಡಿದ್ದಾರೆ. ಅಕ್ರಮ ಹಣ ವರ್ಗಾವಣೆಯ ಸುಳಿವು ಸಿಕ್ಕ ಕಾರಣ ಇಡಿ ಅಧಿಕಾರಿಗಳು ಎಂಟ್ರಿ ನೀಡಿದ್ದಾರೆ.
ರನ್ಯಾ ರಾವ್ ಕೇಸಿನಲ್ಲಿ ಈಗಾಗಲೇ ಸಿಬಿಐ ಅಧಿಕಾರಿಗಳು ಹಾಗೂ ಡಿಆರ್‌ಐ ಅಧಿಕಾರಿಗಳು ವಿಚಾರಣೆ ಮಾಡ್ತಾ ಇದ್ದರು. ಇದೀಗ ಇಡಿಯಿಂದ ಇಸಿಐಆರ್( ಎನ್‌ಫೋರ್ಸ್‌ಮೆಂಟ್ ಕೇಸ್ ಇನ್ ಫಾರ್ಮೇಷನ್ ರಿಪೋರ್ಟ್) ದಾಖಲಾಗಿದೆ. ಅಕ್ರಮ ಹಣ ವರ್ಗಾವಣೆ ಕಾರಣಕ್ಕಾಗಿ ಈ ಕೇಸು ದಾಖಲು ಮಾಡಲಾಗಿದೆ.
ಜಾರಿ ನಿರ್ದೇಶನಾಲಯ ಅಧಿಕಾರಿಗಳು ಇಸಿಐಆರ್ ದಾಖಲಾದ ಬೆನ್ನಲ್ಲೇ ಬೆಂಗಳೂರಿನ ಹಲವು ಕಡೆ ದಾಳಿ ಮಾಡಿದ್ದಾರೆ.
