Home » Arrest: ಸರಕಾರಿ ಉದ್ಯೋಗ ಕೊಡಿಸುವುದಾಗಿ ವಂಚನೆ ಪ್ರಕರಣ; ಆರೋಪಿ ಸಚಿತಾ ರೈ ಬಂಧನ

Arrest: ಸರಕಾರಿ ಉದ್ಯೋಗ ಕೊಡಿಸುವುದಾಗಿ ವಂಚನೆ ಪ್ರಕರಣ; ಆರೋಪಿ ಸಚಿತಾ ರೈ ಬಂಧನ

1 comment

Arrest: ಹಣ ಪಡೆದು ಉದ್ಯೋಗ ನೀಡುವುದಾಗಿ ವಂಚನೆ ಮಾಡಿ ಜನರನ್ನು ಏಮಾರಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಶಾಲಾ ಶಿಕ್ಷಕಿ ಪೆರ್ಲ ಶೇಣಿ ಬಳ್ತಕ್ಕಲ್‌ ನಿವಾಸಿ ಸಚಿತ ರೈ (27) ಬಂಧನ ಮಾಡಲಾಗಿದೆ.

ಕಾಸರಗೋಡು ವಿದ್ಯಾನಗರದಲ್ಲಿ ಡಿವೈಎಸ್ಪಿ ಸಿ.ಕೆ.ಸುನೀಲ್‌ ಕುಮಾರ್‌ ಅವರ ನೇತೃತ್ವದಲ್ಲಿ ಮಹಿಳಾ ಮತ್ತು ವಿದ್ಯಾನಗರ ಪೊಲೀಸರು ಗುರುವಾರ ಸಂಜೆ ಆರೋಪಿಯನ್ನು ಬಂಧನ ಮಾಡಿದ್ದಾರೆ. ಸಚಿತಾ ರೈ ಕಾಸರಗೋಡು ನ್ಯಾಯಾಲಯಕ್ಕೆ ಶರಣಾಗಲು ಬರುತ್ತಿದ್ದ ಸಂದರ್ಭದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಈಗಾಗಲೇ 13 ಕ್ಕೂ ಹೆಚ್ಚು ಪ್ರಕರಣಗಳು ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿದೆ.

ಮೂರು ವಾರಗಳ ಕಾಲ ತಲೆಮರೆಸಿಕೊಂಡಿದ್ದ ಸಚಿತಾ ರೈ ವಿರುದ್ಧ ಕುಂಬಳೆ, ಬದಿಯಡ್ಕ, ಮಂಜೇಶ್ವರ, ಕಾಸರಗೋಡು, ಆದೂರು, ಮೇಲ್ಪರಂಬ ಹಾಗೂ ಉಪ್ಪಿನಂಗಡಿ ಪೊಲೀಸ್‌ ಠಾಣೆಗಳಲ್ಲಿ ಕೇಸುಗಳು ದಾಖಲಾಗಿದೆ.

You may also like

Leave a Comment