5
Bangalore: ಬೆಂಗಳೂರಿನ ಕಲಾಸಿಪಾಳ್ಯದ ಕೇಸರಿ ಶಾಲು ಧರಿಸಿದ್ದಕ್ಕೆ ಕೂಲಿ ಕಾರ್ಮಿಕನ ಮೇಲೆ ಹಲ್ಲೆ ಮಾಡಿದ ಘಟನೆಗೆ ಸಂಬಂಧಪಟ್ಟಂತೆ ಕಲಾಸಿಪಾಳ್ಯ ಪೊಲೀಸರು ಮೂವರು ಆರೋಪಿಗಳನ್ನು ಬಂಧನ ಮಾಡಿದ್ದಾರೆ. ಬೆಂಗಳೂರು ಜಿಲ್ಲಾ ಪೊಲೀಸ್ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.
ಆಗಸ್ಟ್ 24,2025 ರಂದು ಕಲಾಸಿಪಾಳ್ಯದ ರಾಯಲ್ ಟ್ರಾವೆಲ್ಸ್ ಕಂಪನಿ ಸಮೀಪದಲ್ಲಿ ಈ ಘಟನೆ ನಡೆದಿದೆ. ಸುರೇಂದ್ರ ಕುಮಾರ್ ಎಂಬ ಕೂಲಿ ಕಾರ್ಮಿಕ ವ್ಯಕ್ತಿ ಕೇಸರಿ ಶಾಲು ಧರಿಸಿದ್ದು, ಕೆಲವರು ದಾಳಿ ನಡೆಸಿದ್ದಾರೆ.
ಆರೋಪಿಗಳಾದ ತಬ್ರೇಜ್, ಇಮ್ರಾನ್ ಮತ್ತು ಅಜೀಜ್ ಎಂಬುವವರು ಸುರೇಂದ್ರ ಕುಮಾರ್ ಅವಾಚ್ಯ ಶಬ್ದಗಳಿಂದ ಬೈದು ದೈಹಿಕ ಹಲ್ಲೆ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಹಲ್ಲೆಗೊಳಗಾದ ಸುರೇಂದ್ರ ಕುಮಾರ್ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ದಾಖಲು ಮಾಡಿದ್ದಾರೆ.
ಮೂವರು ಆರೋಪಿಗಳಾದ ತಬ್ರೇಜ್, ಇಮ್ರಾನ್ ಮತ್ತು ಅಜೀಜ್‌ರನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.
