Home » ಬಂಟ್ವಾಳ: ಬುರ್ಖಾ ಧರಿಸಿ ಮಾರುವೇಷದಲ್ಲಿ ಬಂದು ಪತಿಗೆ ಕತ್ತಿಯಿಂದ ಮಾರಣಾಂತಿಕ ಹಲ್ಲೆ ಮಾಡಿದ ಪತ್ನಿ

ಬಂಟ್ವಾಳ: ಬುರ್ಖಾ ಧರಿಸಿ ಮಾರುವೇಷದಲ್ಲಿ ಬಂದು ಪತಿಗೆ ಕತ್ತಿಯಿಂದ ಮಾರಣಾಂತಿಕ ಹಲ್ಲೆ ಮಾಡಿದ ಪತ್ನಿ

0 comments
Crime

Bantwala: ಟೆಕ್ಸ್‌ಟೈಲ್‌ ಅಂಗಡಿಗೆ ಮಾರುವೇಷದಲ್ಲಿ ಬಂದ ಪತ್ನಿ ಗಂಡನಿಗೆ ಕತ್ತಿಯಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಬಿಸಿ ರೋಡಿನಲ್ಲಿ ಬುಧವಾರ ಸಂಜೆ ನಡೆದಿದೆ.

ಕೃಷ್ಣಕುಮಾರ್‌ ಸೋಮಯಾಜಿ ಅವರಿಗೆ ಪತ್ನಿ ಜ್ಯೋತಿ ಸೋಮಯಾಜಿ ಎಂಬುವವರು ಆರೋಪಿತ ಮಹಿಳೆ.

ಬಿಸಿ ರೋಡಿನ ಟೆಕ್ಸ್‌ಟೈಲ್‌ ಅಂಗಡಿಗೆ ನುಗ್ಗಿದ ಮಹಿಳೆ, ಕ್ಯಾಶ್‌ ಕೌಂಟರ್‌ನಲ್ಲಿ ಕುಳಿತಿದ್ದ ಗಂಡನಿಗೆ ಬುರ್ಖಾ ಧರಿಸಿ ಬಂದಿದ್ದು, ಪತ್ನಿ ಕತ್ತಿಯಿಂದ ಕಡಿದು ಪರಾರಿಯಾಗಿದ್ದರು.

ಕೃಷ್ಣ ಸೋಮಯಾಜಿ ಅವರಿಗೆ ಗಂಭೀರ ಗಾಯವಾಗಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅವರಿಗೆ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿತೆ ಜ್ಯೋತಿ ಸೋಮಯಾಜಿ ಅವರನ್ನು ಬಂಟ್ವಾಳ ಪೊಲೀಸರು ಬಂಧನ ಮಾಡಿದ್ದಾರೆ.

ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಕೊಲೆ ಯತ್ನಕ್ಕೆ ಕಾರಣವೇನೆಂದು ತಿಳಿದು ಬಂದಿಲ್ಲ. ಕೌಟುಂಬಿಕ ಕಲಹದ ಕುರಿತು ಮಾತು ಕೇಳಿ ಬಂದಿದ್ದು, ಕೌಟುಂಬಿಕ ವಿಚಾರಕ್ಕೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯ ಮೆಟ್ಟಿಲು ಏರಿದ್ದರು ಎಂದು ವರದಿಯಾಗಿದೆ.

You may also like