Home » Bantwala: ಅಬ್ದುಲ್‌ ರಹಿಮಾನ್‌ ಹತ್ಯೆಗೆ ಆಕ್ರೋಶ: ಸುರತ್ಕಲ್‌ನಲ್ಲಿ ಖಾಸಗಿ ಬಸ್‌ಗೆ ಕಲ್ಲು ತೂರಾಟ

Bantwala: ಅಬ್ದುಲ್‌ ರಹಿಮಾನ್‌ ಹತ್ಯೆಗೆ ಆಕ್ರೋಶ: ಸುರತ್ಕಲ್‌ನಲ್ಲಿ ಖಾಸಗಿ ಬಸ್‌ಗೆ ಕಲ್ಲು ತೂರಾಟ

0 comments

Mangalore: ಬಂಟ್ವಾಳ ತಾಲೂಕಿನ ಇರಾ ಕೋಡಿ ಎಂಬಲ್ಲಿ ಅಬ್ದುಲ್‌ ರಹಿಮಾನ್‌ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಿಡಿಗೇಡಿಗಳು ಸುರತ್ಕಲ್‌ ಖಾಸಗಿ ಬಸ್‌ಗೆ ಕಲ್ಲು ತೂರಾಟ ಮಾಡಿದ್ದಾರೆ.

ಈ ನಡುವೆ ಬಂಟ್ವಾಳದ ರಹಿಮಾನ್‌ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಬಂಟ್ವಾಳದವರೆಗಿನ ನೂರಾರು ಅಂಗಡಿಗಳನ್ನು ಮಾಲೀಕರು ಸ್ವಯಂಪ್ರೇರಿತವಾಗಿ ಬಂದ್‌ ಮಾಡಿರುವ ಕುರಿತು ವರದಿಯಾಗಿದೆ.

ಇಂದು ಅಬ್ದುಲ್‌ ರಹಿಮಾನ್‌ ಮೃತದೇಹವನ್ನು ಕೊಳತ್ತಮಜಲಿಗೆ ಇಂದು ಬೆಳಗ್ಗೆ ಸಾಗಿಸಲಾಯಿತು. ಕುತ್ತಾರ್‌ ಮದನಿ ನಗರ ಮಸೀದಿಯಲ್ಲಿ ರಹಿಮಾನ್‌ ಅವರ ಮಯ್ಯತ್‌ ಸ್ನಾನ ಮಾಡಲಾಗಿದ್ದು, ನಂತರ ಮಯ್ಯತ್‌ ನಮಾಝ್‌ ನಂತರ ಪೊಲೀಸ್‌ ಬಂದೋಬಸ್ತ್‌ನಲ್ಲಿ ಮೆರವಣಿಗೆ ಮಾಡಲಾಯಿತು. ಮಂಗಳೂರಿನಿಂದ ಬಂಟ್ವಾಳದವರೆಗೆ ಅಂಗಡಿಗಳನ್ನು ಬಂದ್‌ ಮಾಡಿ ಮುಸ್ಲಿಂ ವ್ಯಾಪಾರಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಸುರತ್ಕಲ್‌ ಮಂಗಳೂರು ಸುರತ್ಕಲ್‌, ಮುಕ್ಕ ಹಳೆಯಂಗಡಿ, ಕಿನ್ನಿಗೋಳಿ ಮಾರ್ಗವಾಗಿ ಕಟೀಲಿಗೆ ಸಂಚರಿಸುವ ನಂದಿನಿ ಬಸ್‌ಗೆ ಸುರತ್ಕಲ್‌ನಲ್ಲಿ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಬಸ್‌ ಸಂಚಾರವನ್ನು ಸ್ಥಗಿತ ಮಾಡಿದ್ದರಿಂದ ಪ್ರಯಾಣಿಕರು ಬೇರೆ ಬಸ್‌ನಲ್ಲಿ ತೆರಳಿದ್ದು, ಸುರತ್ಕಲ್‌ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ ಕುರಿತು ವರದಿಯಾಗಿದೆ.

You may also like