Home » Bengaluru: ಬೆಂಗಳೂರು: ನಡು ರಸ್ತೆಯಲ್ಲೇ ಪತ್ನಿಯ ಕತ್ತು ಕೊಯ್ದು ಕೊಲೆ!

Bengaluru: ಬೆಂಗಳೂರು: ನಡು ರಸ್ತೆಯಲ್ಲೇ ಪತ್ನಿಯ ಕತ್ತು ಕೊಯ್ದು ಕೊಲೆ!

by ಕಾವ್ಯ ವಾಣಿ
0 comments

Bengaluru: ಕ್ರೂರ ಪತಿಯೊಬ್ಬ ನಡು ರಸ್ತೆಯಲ್ಲೇ ತನ್ನ ಪತ್ನಿಯ ಕತ್ತು ಕೊಯ್ದು, ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಗರದ (Bengaluru)ಎಲೆಕ್ಟ್ರಾನಿಕ್ ಸಿಟಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಾಗೇಪಲ್ಲಿ ಮೂಲದ ಶಾರದ (35) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಎ. 4 ರಂದು ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಘಟನೆ ನಡೆದಿದೆ. ನಗರದ ದೊಡ್ಡ ತೋಗೂರು ಬಳಿಯ ಪ್ರಗತಿ ನಗರದಲ್ಲಿ ಈ ಘಟನೆ ನಡೆದಿದ್ದು, ಪತಿ ನಡು ರಸ್ತೆಯಲ್ಲಿಯೇ ಚಾಕುವಿನಿಂದ ಪತ್ನಿಯ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದಾನೆ. ಕೊಲೆ ಮಾಡಿ ಎಸ್ಕೆಪ್ ಆಗುತ್ತಿದ್ದ ಆರೋಪಿ ಪತಿಯನ್ನು ಸ್ಥಳೀಯರು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

You may also like