Home » Mangaluru : ಅಪರಿಚಿತ ಯುವಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ -30 ಮಂದಿಯಿಂದ ಹಲ್ಲೆ, 15 ಜನ ಅರೆಸ್ಟ್!!

Mangaluru : ಅಪರಿಚಿತ ಯುವಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ -30 ಮಂದಿಯಿಂದ ಹಲ್ಲೆ, 15 ಜನ ಅರೆಸ್ಟ್!!

0 comments

Mangaluru : ಮಂಗಳೂರಿನ ಕುಡುಪು ಬಳಿ ಅಪರಿಚಿತ ಯುವಕನ ಶವ ಪತ್ತೆಯಾಗಿ ಭಾರಿ ಕುತೂಹಲಕ್ಕೆ ಕಾರಣವಾಗಿತ್ತು. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಅನುಮಾನಕ್ಕೆ ಎಡೆ ಮಾಡಿಕೊಟ್ಟಿತ್ತು. ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು 30 ಮಂದಿಯ ಗೊಂಪೊಂದು ಸೇರಿ ಯುವಕನನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಇದೀಗ 15 ಮಂದಿಯನ್ನು ಇಡೀ ಬಸವಲಿಸರು ಅರೆಸ್ಟ್ ಮಾಡಿದ್ದಾರೆ.

ATM ಗಳಲ್ಲಿ 100, 200 ಮುಖಬೆಲೆಯ ನೋಟು ವಿತರಿಸುವಂತೆ ಬ್ಯಾಂಕುಗಳಿಗೆ RBI ಸೂಚನೆ

ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸರು ‘ಆತನ ಸಾವಿಗೆ ನಶೆಯಿಂದ ಬಿದ್ದು ಗಾಯಗೊಂಡಿರುವುದು ಕಾರಣವಾಗಿರಬಹುದು ಅಥವಾ ಯಾರೊಂದಿಗೋ ಗಲಾಟೆ ಮಾಡಿ ಉರುಳಾಡಿ ಗಾಯಗೊಂಡು ಆತ ಸತ್ತಿರಬಹುದು’ ಎಂದು ಶಂಕೆ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ಸುಮಾರು 30ಕ್ಕೂ ಅಧಿಕವಿದ್ದ ಗುಂಪು ಹಲ್ಲೆ ನಡೆಸಿ ಹತ್ಯೆಗೈದಿರುವುದು ದೃಢಪಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿ 15 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.

ಜನಪ್ರತಿನಿಧಿಗಳ ಜೊತೆ ಅನುಚಿತ ವರ್ತನೆ: ಜಿಲ್ಲಾ ಎಸ್ಪಿ ವಿರುದ್ದ ಅವಿಶ್ವಾಸ ನಿರ್ಣಯಕ್ಕೆ ಆಗ್ರಹ

ಅಲ್ಲದೆ ಈವರೆಗಿನ ತನಿಖೆಯಲ್ಲಿ, ಎ.27ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಭಟ್ರ ಕಲ್ಲುರ್ಟಿ ದೈವಸ್ಥಾನದ ಬಳಿಯ ಮೈದಾನದಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯಾವಳಿಯ ಸಂದರ್ಭ ಅಪರಿಚಿತ ವ್ಯಕ್ತಿಗೆ ಯಾವುದೋ ಮಾತಿಗೆ ಸಂಬಂಧಿಸಿ ಸಚಿನ್ ಟಿ. ಎಂಬಾತ ಜಗಳಕ್ಕೆ ಮುಂದಾದಾಗ ಸಹಚರರು ಕೂಡಾ ಜತೆ ಸೇರಿ ಹಲ್ಲೆ ನಡೆಸಿದ್ದಾರೆ. ಆತ ಓಡಿಹೋಗಲು ಯತ್ನಿಸಿದಾಗ ಸುಮಾರು 30 ಮಂದಿ ಸೇರಿ ಹಲ್ಲೆ ನಡೆಸಿದ್ದಾರೆ. ಗುಂಪು ಸೇರಿ ಕೈಯಿಂದ ಮತ್ತು ಕಟ್ಟಿಗೆಯಿಂದ ಹೊಡೆದು ಕಾಲಿನಿಂದ ಯದ್ವಾತದ್ವ ತುಳಿದು ಹಲ್ಲೆ ನಡೆಸಿದ್ದರು. ಈ ಸಮಯ ಕೆಲವರು ತಡೆಯಲು ಯತ್ನಿಸಿದರೂ ನಿರಂತರ ಹಲ್ಲೆ ನಡೆಸಿದ ಕಾರಣ ಅಪರಿಚಿತ ವ್ಯಕ್ತಿ ಮೃತಪಟ್ಟಿರುವುದು ಕಂಡುಬಂದಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದರು.

You may also like