5
ಬೆಳ್ತಂಗಡಿ: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿಕೆ ನೀಡಿದ ಬುರುಡೆ ಕೇಸ್ ಗೆ ಸಂಬಂಧ ಸಾಕ್ಷಿ. ಕಂ ಆರೋಪಿ ಚಿನ್ನಯ್ಯಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಧರ್ಮಸ್ಥಳ ಅಸಹಜ ಹೆಣ ಹೂತ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿ ಚಿನ್ನಯ್ಯಗೆ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದ ಚಿನ್ನಯ್ಯನ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, 1 ಲಕ್ಷ ರೂ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿ ಸೇರಿದಂತೆ 12 ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಚಿನ್ನಯ್ಯ ಇಂದು ಮಂಗಳವಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
