Home » Dakshina Kannada Bajrang Dal: ಪಟಾಕಿ ಸಿಡಿಸಿ ಸಂಭ್ರಮಿಸಿದ ಬಜರಂಗದಳ ಕಾರ್ಯಕರ್ತನ ಮೇಲೆ ಕಾಂಗ್ರೆಸ್‌ ಕಾರ್ಯಕರ್ತನಿಂದ ಹಲ್ಲೆ ಆರೋಪ

Dakshina Kannada Bajrang Dal: ಪಟಾಕಿ ಸಿಡಿಸಿ ಸಂಭ್ರಮಿಸಿದ ಬಜರಂಗದಳ ಕಾರ್ಯಕರ್ತನ ಮೇಲೆ ಕಾಂಗ್ರೆಸ್‌ ಕಾರ್ಯಕರ್ತನಿಂದ ಹಲ್ಲೆ ಆರೋಪ

0 comments
Dakshina Kannada Bajrang Dal

Dakshina Kannada Bajrang Dal: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುಂಪಲ ಎಂಬಲ್ಲಿ ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಸಂಭ್ರಮಕ್ಕೆಂದು ಪಟಾಕಿ ಸಿಡಿಸಿದ್ದಕ್ಕೆ ಬಜರಂಗದಳ ಕಾರ್ಯಕರ್ತನಿಗೆ ಕಾಂಗ್ರೆಸ್‌ ಕಾರ್ಯಕರ್ತನಿದ ಹಲ್ಲೆ ನಡೆದಿರುವ ಆರೋಪ ಕೇಳಿ ಬಂದಿದೆ.

ಪ್ರವೀಣ್‌ ಪೂಜಾರಿ ಯಾನೆ ಪಿಟ್ಟಿ (39) ಎಂಬುವವರೇ ಹಲ್ಲೆಗೊಳಗಾದ ವ್ಯಕ್ತಿ. ಇವರು ಕುಂಪಲ ನಿವಾಸಿಯಾಗಿರುವ ಬಜರಂಗದಳದ ಕಾರ್ಯಕರ್ತ.

ಇದನ್ನೂ ಓದಿ: ಇಂದು ಪದವೀಧರ, ಶಿಕ್ಷಕರ ಕ್ಷೇತ್ರದ ಫಲಿತಾಂಶ; ಯಾರಿಗೆ ಒಲಿಯಲಿದ್ದಾಳೆ ಅದೃಷ್ಟಲಕ್ಷ್ಮಿ?

ಗೌತಮ್‌ ಎಂಬುವವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇವರು ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತ, ಸ್ಥಳೀಯ ಕೇಸರಿ ಮಿತ್ರ ವೃಂದ ಸಂಘಟನೆಯ ಸದಸ್ಯ. ತೀವ್ರವಾಗಿ ಗಾಯಗೊಂಡ ಪ್ರವೀಣ್‌ ಪೂಜಾರಿಯನ್ನು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಬಿಜೆಪಿ ಅಭ್ಯರ್ಥಿ ಜಯಗಳಿಸಿದ ಕಾರಣ ಬಜರಂಗದಳ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಪಟ್ಟಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಬಜರಂಗದಳ -ಕೇಸರಿ ಮಿತ್ರ ವೃಂದದ ಸದಸ್ಯರ ನಡುವೆ ಗಲಾಟೆ ಆಗಿದೆ. ಈ ದ್ವೇಷ ಇಟ್ಟುಕೊಂಡು ನಿನ್ನೆ ಪ್ರವೀಣ್‌ ಪೂಜಾರಿ ಅವರು ತಮ್ಮ ಕೆಲಸ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಅಡ್ಡಗಟ್ಟಿ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಪ್ರವೀಣ್‌ ಅವರು ಚರಂಡಿಗೆ ಬಿದ್ದು, ತಲೆಗೆ ಗಾಯವಾಗಿದೆ. ಉಳ್ಳಾಲ ಠಾಣೆ ಪೊಲೀಸರು ದೂರು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಬಿಜೆಪಿ ಸೋತಿದ್ದು ಈ 3 ಕಾರಣಗಳಿಂದ !!

You may also like

Leave a Comment