Home » Belthangady : ಯುಕನಿಂದ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ – ಯುವತಿ ಗರ್ಭಿಣಿ

Belthangady : ಯುಕನಿಂದ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ – ಯುವತಿ ಗರ್ಭಿಣಿ

0 comments

Belthangady : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಒಂದು ಪೈಶಾಚಿಕ ಕೃತ್ಯ ನಡೆದಿದ್ದು ಯುವಕನೋರ್ವ ಅಪ್ರಾಪ್ತ ಯುವತಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿ ಮಾಡಿದ್ದಾನೆ.

ಹೌದು, ಶಿರ್ಲಾಲು ಗ್ರಾಮದ ನಿವಾಸಿ ಸನತ್ (28ವ) ಎಂಬಾತ ಅತ್ಯಾಚಾರವೆಸಗಿದ ಆರೋಪಿ. ಆರೋಪಿ ಸನತ್ ಕಾರಿನಲ್ಲಿ ಚಾಲಕನಾಗಿ ದುಡಿಯುತ್ತಿದ್ದು, ಬಾಲಕಿಯ ತಂದೆಯೊಂದಿಗೆ ಅಗಾಗ ಮನೆಗೆ ಬರುತ್ತಿದ್ದ. ಈ ವೇಳೆ ಅಪ್ರಾಪ್ತ ವಯಸ್ಸಿನ ಬಾಲಕಿ ಜೊತೆ ಸಲುಗೆಯಿಂದ ಇದ್ದು ಬಾಲಕಿಯ ಹುಟ್ಟುಹಬ್ಬದಂದು ಬಂದು ರಾತ್ರಿ ಮನೆಯಲ್ಲಿ ಉಳಿದುಕೊಂಡಿದ್ದ. ಈ ಸಂದರ್ಭದಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಇಷ್ಟೇ ಅಲ್ಲದೆ ನಂತರದ ದಿನಗಳಲ್ಲಿ ಕೂಡಾ ಆಗಾಗ ರಾತ್ರಿ ವೇಳೆಯಲ್ಲಿ ಬಂದು ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ ಆಕೆ ಗರ್ಭಿಣಿಯಾಗಿದ್ದು, ಇದೀಗ ಆರೋಪಿ ಸನತ್ ವಿರುದ್ದ ಬಾಲಕಿ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like