Bangalore: ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಓರ್ವ ಆರೋಪಿಯನ್ನು ಕಾಟನ್ ಪೇಟೆ ಪೊಲೀಸರು ಬಂಧನ ಮಾಡಿ, ಸ್ಥಳ ಮಹಜರು ಮಾಡಿರುವ ಕುರಿತು ವರದಿಯಾಗಿದೆ.
ಪೊಲೀಸರು ಆರೋಪಿಯ ಹೆಸರನ್ನು ಬಹಿರಂಗ ಪಡಿಸಿಲ್ಲ. ಪೊಲೀಸರು ಭಾನುವಾರ ರಾತ್ರಿ ಓರ್ವ ಆರೋಪಿಯನ್ನು ಬಂಧನ ಮಾಡಿ ವಿಚಾರಣೆ ಮಾಡಿದ್ದು, ಚಿಕ್ಕಪೇಟೆ ಉಪವಿಭಾಗದ ಎಸಿಪಿ ರಮೇಶ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.
ಸೈಯದ್ ನಸ್ರು (30) ಬಂಧಿತ ಆರೋಪಿ. ಈತ ಬಿಹಾರದ ಚಂಪರಣ್ ಮೂಲದವನು. ಈತ ಕೃತ್ಯ ನಡೆದ ಸ್ಥಳದಿಂದ 50 ಮೀಟರ್ ಅಂತರದಲ್ಲಿರುವ ಪ್ಲಾಸ್ಟಿಕ್, ಬಟ್ಟೆ ಹೊಲಿಯುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ವರದಿಯಾಗಿದೆ.
ಕುಡಿದ ಮತ್ತಿನಲ್ಲಿ ನಾನು ಈ ರೀತಿ ಮಾಡಿರುವುದಾಗಿ ಆರೋಪಿ ಪೊಲೀಸರ ಮುಂದೆ ಹೇಳಿದ್ದು, ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಜನವರಿ 24 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಕ್ಷೇಮವಾಗಿದೆ. ಗಾಯ ಮಾಸಲು ಇನ್ನೂ ಎರಡು ವಾರ ಬೇಕು ಎಂದು ಹೇಳಲಾಗಿದೆ.
