Home » Puttur: ವಿಷ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಸಾವು

Puttur: ವಿಷ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಸಾವು

1 comment
Puttur

Puttur: ವಿಷ ಸೇವಿಸಿದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತ ಹೊಂದಿದ ಘಟನೆಯೊಂದು ಸುಳ್ಯದಲ್ಲಿ ನಡೆದಿದೆ. ಪುತ್ತೂರು ಖಾಸಗಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆರತಿ ಎಂಬಾಕೆಯೇ ಮೃತ ಯುವತಿ. ಇವರು ಐವರ್ನಾಡು ಸಮೀಪದ ಪಾಂಬಾರು ಸೋಮಸುಂದರ ಎಂಬುವವರ ಪುತ್ರಿ.

ಇದನ್ನೂ ಓದಿ: Rape News: 6 ನೇ ತರಗತಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಪ್ರಾಂಶುಪಾಲ ಸೆರೆ

ಆರತಿ ಹದಿನೈದು ದಿನಗಳ ಹಿಂದೆ ವಿಷ ಸೇವಿಸಿದ್ದು, ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಿ ಅಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೇ ವೈದ್ಯರ ಸಲಹೆ ಮೇರೆಗೆ ಸುಳ್ಯಕ್ಕೆ ತಂದು ಚಿಕಿತ್ಸೆ ಕೊಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತ ಹೊಂದಿರುವುದಾಗಿ ವರದಿಯಾಗಿದೆ.

You may also like

Leave a Comment