Home » Mangaluru: ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ಯುವಕ ಕಿರುಕುಳ; ಹಿಂದೂ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ!!

Mangaluru: ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ಯುವಕ ಕಿರುಕುಳ; ಹಿಂದೂ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ!!

0 comments

Mangaluru: ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ಯುವಕನೋರ್ವ ಕಿರುಕುಳ ನೀಡಿರುವ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನಡೆದಿದೆ. ಈ ಕುರಿತು ನಗರ ಠಾಣೆಯ ಎದುರು ಬಿಗುವಿನ ವಾತಾವರಣ ಉಂಟಾಗಿದೆ.

ಕಡಬ ಮೂಲದ ಶಾಕೀರ್‌ ಎಂಬಾತ ಪುತ್ತೂರು ಕಂಬಳ (Kambala) ವೀಕ್ಷಿಸಲು ಬಂದಿದ್ದು, ಬಾಲಕಿಗೆ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಆರೋಪಿಯನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದಿರುವ ಕುರಿತು ವರದಿಯಾಗಿದೆ.

ಹಿಂದೂ ಕಾರ್ಯಕರ್ತರು ವಿಷಯ ತಿಳಿದು ಪುತ್ತೂರು ಠಾಣೆಗೆ ಮುತ್ತಿಗೆ ಹಾಕಿ ಶಾಕೀರ್‌ ನನ್ನು ತಮಗೆ ಒಪ್ಪಿಸುವಂತೆ ಒತ್ತಾಯ ಮಾಡಿರುವ ಘಟನೆ ನಡೆದಿದೆ. ಪೋಕ್ಸೋ ಕಾಯ್ದೆಯಡಿ ಆರೋಪಿ ಶಾಕೀರ್‌ನನ್ನು ಬಂಧಿಸಿ ಪ್ರಕರಣ ದಾಖಲು ಮಾಡಲಾಗಿದೆ.

You may also like

Leave a Comment