Home » Dakshina Kannada: Mangaluru: ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ; ಇಂದು (ಮೇ.2) ದ.ಕ. ಜಿಲ್ಲೆ ಬಂದ್‌-ವಿಹಿಂಪ

Dakshina Kannada: Mangaluru: ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ; ಇಂದು (ಮೇ.2) ದ.ಕ. ಜಿಲ್ಲೆ ಬಂದ್‌-ವಿಹಿಂಪ

0 comments

Dakshina Kannada: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್‌ಗೆ ವಿಶ್ವ ಹಿಂದೂ ಪರಿಷತ್‌ ಕರೆ ನೀಡಿದೆ.

ಇಂದು ಮಂಗಳೂರಿನ ನಾರಾಯಣ ಗುರು ವೃತ್ತದ ಬಳಿ ಮೂರು ಬಸ್ಸುಗಳಿಗೆ ಕಿಡಿಕೇಡಿಗಳು ಕಲ್ಲು ತೂರಾಟ ಮಾಡಿರುವ ಘಟನೆ ನಡೆದಿದೆ.

ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್‌ಗೆ ಕರೆ ನೀಡಲಾಗಿದೆ. ವಿಎಚ್‌ಪಿ ಮುಖಂಡ ಶರಣ್‌ ಪಂಪ್‌ವೆಲ್‌ ಅವರು ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ಬಂದ್‌ಗೆ ಕರೆ ನೀಡಿದ್ದಾರೆ.

ಎಲ್ಲಾ ವ್ಯಾಪಾರ, ವಹಿವಾಟು, ವಾಹನ ಸಂಚಾರ್‌ ಬಂದ್‌ ಮಾಡಲು ಕರೆ ನೀಡಲಾಗಿದೆ. ವಿಶ್ವ ಹಿಂದೂ ಪರಿಷತ್‌, ಬಜರಂಗದಳ, ಹಿಂದೂ ಸಂಘಟನೆಗಳಿಂದ ಬಂದ್‌ಗೆ ಕರೆ ನೀಡಲಾಗಿದೆ. ಪೊಲೀಸ್‌ ವೈಫಲ್ಯದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಮಂಗಳೂರಿನಲ್ಲಿ ಶರಣ್‌ ಪಂಪ್‌ವೆಲ್‌ ತಿಳಿಸಿದ್ದಾರೆ.

You may also like