Home » ಧರ್ಮಸ್ಥಳ ಕೇಸ್‌: SIT ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು ಮಾಡಿ ಹೈಕೋರ್ಟ್‌ ಆದೇಶ

ಧರ್ಮಸ್ಥಳ ಕೇಸ್‌: SIT ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು ಮಾಡಿ ಹೈಕೋರ್ಟ್‌ ಆದೇಶ

0 comments
High Court

Dharmasthala Case: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು ಮಾಡಿ ಹೈಕೋರ್ಟ್‌ ಆದೇಶ ಹೊರಡಿಸಿದೆ.

ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್‌ ತೆರವು ಮಾಡಿ ತನಿಖೆಗೆ ಅನುಮತಿ ನೀಡಿದೆ ಇದರಿಂದ ಗಿರೀಶ್‌ ಮಟ್ಟಣ್ಣನವರ್‌, ಮಹೇಶ್‌ ಶೆಟ್ಟಿ ತಿಮರೋಡಿ, ಟಿ ಜಯಂತ್‌ ಹಾಗೂ ವಿಠ್ಠಲ ಗೌಡಗೆ ಮತ್ತೆ ತನಿಖೆಯ ಬಿಸಿ ಮುಟ್ಟಿದೆ ಎನ್ನಬಹುದು.

ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು ಮಾಡಿ ಹೈಕೋರ್ಟ್‌ ಆರೋಪಿಗಳಿಗೆ ಕಿರುಕುಳ ನೀಡದಂತೆ ಮಧ್ಯಂತರ ಆದೇಶ ವಿಸ್ತರಣೆ ಮಾಡಿದೆ.

ಈ ಆದೇಶದಿಂದ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಮುಂದುವರೆಯಲಿದ್ದು, ಪಿತೂರಿ ನಡೆಸಿದ ಆರೋಪ ಎದುರಿಸುತ್ತಿದ್ದ ವಿಠಲಗೌಡ, ಗಿರೀಶ್ ಮಟ್ಟಣ್ಣವರ್, ಮಹೇಶ್ ತಿಮರೋಡಿ ಮತ್ತು ಟಿ. ಜಯಂತ್ ಅವರು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗಬೇಕಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣ (ಎಫ್‌ಐಆರ್39/2025) ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಬೆಳ್ತಂಗಡಿ ಪೊಲೀಸರು ಜಾರಿ ಮಾಡಿದ್ದ ನೋಟಿಸ್ ಪ್ರಶ್ನಿಸಿ, ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ. ಜಯಂತ್ ಮತ್ತು ವಿಠಲ್‌ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ. ಎಂ. ನವಾಜ್ ಅವರಿದ್ದ ನ್ಯಾಯಪೀಠ ತಡೆಯಾಜ್ಞೆ ತೆರವುಗೊಳಿಸಿ ಆದೇಶಿಸಿದೆ.

You may also like