Bantwala: ಬಿ.ಸಿ.ರೋಡಿನ ಅಜ್ಜಿಬೆಟ್ಟು ಕ್ರಾಸ್ ಬಳಿ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಂಟ್ವಾಳದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮೃತಪಟ್ಟಿದ್ದಾರೆ.
ಈ ಘಟನೆ ನಡೆದಿರುವುದು ಜೂನ್ 30 ರಂದು. ಮೃತರನ್ನು ಶಂಭೂರು ಕೊಪ್ಪಳ ನಿವಾಸಿ ಚಿದಾನಂದ (50) ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದಲ್ಲಿ ಬಿ.ಸಿ.ರೋಡ್ ಪೇಟೆಯಿಂದ ಅಜ್ಜಿಬೆಟ್ಟು ಕ್ರಾಸ್‌ನಲ್ಲಿ ದಾಟುವ ಸಂದರ್ಭ ಮಂಗಳೂರು ಕಡೆಗೆ ಸಾಗುತ್ತಿದ್ದ ಟ್ಯಾಂಕರ್ ಲಾರಿ ಡಿಕ್ಕಿಯಾಗಿದೆ.
ಡಿಕ್ಕಿ ರಭಸಕ್ಕೆ ಚಿದಾನಂದರು ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ತೀವ್ರ ಗಾಯದೊಂದಿಗೆ ಸಾವನ್ನಪ್ಪಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದ.
ಇದನ್ನೂ ಓದಿ:Bengaluru: ಚೀಟಿ ನೆಪದಲ್ಲಿ 40ಕ್ಕೂ ಹೆಚ್ಚು ಮಂದಿಗೆ ಯಾಮಾರಿಸಿ ಪರಾರಿ
