

ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತ ಅಮೃತಾಗೌಡರಿಗೆ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಕೊನೆಗೂ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಪೊಲೀಸರು ಬಂಧನ ಮಾಡಿದ್ದಾರೆ.
ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇಂದು (ಜ.26) ಕೇರಳ ಗಡಿಯಲ್ಲಿ ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಪೊಲೀಸರು ಬಂಧನ ಮಾಡಿದ್ದಾರೆ. ಇಂದು ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದ್ದಾನೆ ಎನ್ನುವ ಸುಳಿವು ಸಿಕ್ಕ ಬೆನ್ನಲ್ಲೇ ಪೊಲೀಸರು ಅಲರ್ಟ್ ಆಗಿದ್ದು, ಆದರೆ ಪೊಲೀಸರು ಬಂಧನ ಮಾಡುತ್ತಾರೆ ಎನ್ನುವ ವಿಷಯ ತಿಳಿಯುತ್ತಿದ್ದಂತೆಯೇ ರಾಜೀವ್ ಗೌಡ ಮಂಗಳೂರಿನಿಂದ ಎಸ್ಕೇಪ್ ಆಗಿದ್ದ.













