Hanagal Moral Policing: ಹಾವೇರಿ ಜಿಲ್ಲೆಯ ಹಾನಗಲ್‌ನಲ್ಲಿ ಜ.8 ರಂದು ಮುಸ್ಲಿಂ ಮಹಿಳೆಯೊಬ್ಬರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆದ ಘಟನೆಯೊಂದು ನಡೆದಿದೆ. ಗ್ಯಾಂಗ್‌ರೇಪ್ ಪ್ರಕರಣ ಕುರಿತು ಪೊಲೀಸರು ನಿರ್ಲಕ್ಷ್ಯ ವಹಿಸುತ್ತಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ಇದೀಗ ಸಂತ್ರಸ್ತ ಮಹಿಳೆಗೆ ಜೀವ ಭಯವಿರುವ ಕುರಿತು ಆರೋಪ ಕೇಳಿ ಬಂದಿದೆ.
ಸಂತ್ರಸ್ತೆಯ ಸಹೋದರಿ ಹೇಳಿರುವ ಪ್ರಕಾರ, ಯಾವುದೇ ರಕ್ಷಣೆ ನೀಡಲಾಗುತ್ತಿಲ್ಲ, ವಿಚಾರಣೆಗೆ ಕರೆದುಕೊಂಡು ಹೋಗುವಾಗ ಯಾವುದೇ ರಕ್ಷಣಾತ್ಮಕ ಕ್ರಮಗಳನ್ನು ತೆಗೆದುಕೊಂಡಿಲ್ಲ, ಮನೆಗೆ ಕಳುಹಿಸುವಾಗಲೂ ರಕ್ಷಣೆ ನೀಡಲಾಗುತ್ತಿಲ್ಲ ಎಂದು ಹೇಳಲಾಗಿದೆ.
ಸಂತ್ರಸ್ತೆ ನೇರವಾಗಿ ತನ್ನ ಮೇಲೆ ಗ್ಯಾಂಗ್ ರೇಪ್ ನಡೆದಿದೆ ಎಂದು ಆರೋಪ ಮಾಡಿದ್ದರೂ ರಾಜ್ಯ ಸರಕಾರ ಮತ್ತು ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ಪರಿಗಿಣಿಸಿಲ್ಲ. ಹಾನಗಲ್‌ನ ಯುವಕರು ತನ್ನ ಮೇಲೆ ಗ್ಯಾಂಗ್ ರೇಪ್ ಮಾಡಿದ್ದಾರೆ ಎಂದು ಮಹಿಳೆ ದೂರು ದಾಖಲಿಸಿದರೂ ಮಹಿಳೆಯ ಹೇಳಿಕೆಯನ್ನು ಪಡೆದು ಕೇವಲ ನೈತಿಕ ಪೊಲೀಸ್‌ಗಿರಿಯ ಬಗ್ಗೆ ದೂರು ದಾಖಲು ಮಾಡಿಕೊಂಡಿದ್ದರು. ಅನಂತರ ಸಂತ್ರಸ್ತೆ ತನ್ನ ಹೇಳಿಕೆಯನ್ನು ನ್ಯಾಯಾಲಯದ ಮುಂದೆ ಸಂತ್ರಸ್ತೆ ಹೇಳಿದ ಮೇಲಷ್ಟೇ ಗ್ಯಾಂಗ್ ರೇಪ್ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಲಾಗಿದೆ.
ಇದನ್ನೂ ಓದಿ: Health Tips: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ನೀರು ಕುಡಿದು ನೋಡಿ; ನಿಮಗೆ ಸಿಗಲಿದೆ ಭರಪೂರ ಆರೋಗ್ಯ ಪ್ರಯೋಜನ!!
ರೇಪ್ ಮಾಡಿದವರು ಸಾಕ್ಷ್ಯ ನಾಶಕ್ಕಾಗಿ ಸಂತ್ರಸ್ತ ಮಹಿಳೆಗೆ ಅಪಾಯ ಉಂಟು ಮಾಡುವ ಸಾಧ್ಯತೆಯನ್ನು ಮನಗಂಡು ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನಂತರ ಸಾಂತ್ವನ ಕೇಂದ್ರದಲ್ಲಿ ಇಡಲಾಗಿತ್ತು. ನಂತರ ಸ್ಥಳ ಮಹಜರು ಹೆಸರಲ್ಲಿ ಆಕೆಯನ್ನು ಅಲ್ಲಿಂದ ಕರೆದುಕೊಂಡು ನೇರವಾಗಿ ಆಕೆಯ ಮನೆಯಲ್ಲಿ ಬಿಟ್ಟು ಹೋಗಿದ್ದಾರೆ ಎಂದು ವರದಿಯಾಗಿದೆ. ಇಲ್ಲಿ ಸಂತ್ರಸ್ತೆಗೆ ಯಾವುದೇ ರೀತಿಯ ರಕ್ಷಣೆ ನೀಡಿಲ್ಲ ಎಂದು ಆರೋಪಿಸಲಾಗಿದೆ.
