1
Murugha Matt Seer POCSO: ಮುರುಘಾ ಶರಣರ ವಿರುದ್ಧ ದಾಖಲಾಗಿದ್ದ ಮೊದಲ ಪೋಕ್ಸೋ ಪ್ರಕರಣದ ಸಂತ್ರಸ್ತ ಬಾಲಕಿಯ ಚಿಕ್ಕಪ್ಪನ ವಿರುದ್ಧ ಪ್ರಕರಣ ದಾಖಲಿಸುವಂತೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮಂಗಳವಾರ ಶಿಫಾರಸು ಮಾಡಿದೆ.
ಮಕ್ಕಳ ಕಲ್ಯಾಣ ಸಮಿತಿ ಮುಂದೆ ಸಂತ್ರಸ್ತ ಬಾಲಕಿ, “ಚಿಕ್ಕಪ್ಪ ನನಗೆ ದೈಹಿಕ ಮತ್ತು ಮಾನಸಿಕ ಕಿರುಕುಳ
ನೀಡುತ್ತಿದ್ದಾರೆ. ನಾನು ಮನೆಯಲ್ಲಿ ಇರಲು ಆಗುವುದಿಲ್ಲ” ಎಂದು ನೀಡಿದ ಹೇಳಿಕೆ ಆಧರಿಸಿ ಮಕ್ಕಳ ಕಲ್ಯಾಣ ಸಮಿತಿ ಶಿಫಾರಸು ಮಾಡಿದೆ.
ಇದನ್ನೂ ಓದಿ: Gruhajyothi: ಇನ್ಮೇಲೆ ಕರೆಂಟ್ ಬಿಲ್ನಿಂದ ಆಧಾರ್ ಡೀಲಿಂಕ್ ಮಾಡುವುದು ಇನ್ನೂ ಸುಲಭ!
ಮೇ 22ರಂದು ಚಿಕ್ಕಪ್ಪನ ಮನೆಯಿಂದ ಬಾಲಕಿ ಕಾಣೆಯಾದ ಬಗ್ಗೆ ದೂರು ದಾಖಲಾಗಿತ್ತು. ಬಾಲಕಿ ಮೈಸೂರಿನ ಒಡನಾಡಿ ಸಂಸ್ಥೆಗೆ ತೆರಳಿ ತನಗೆ ರಕ್ಷಣೆ ನೀಡುವಂತೆ ಕೋರಿದ್ದಳು.
