Home » Hyderabad: ಮಾಜಿ ಮುಖ್ಯಮಂತ್ರಿ ಕೆಸಿಆರ್‌ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ವ್ಯಕ್ತಿ ಶವವಾಗಿ ಪತ್ತೆ

Hyderabad: ಮಾಜಿ ಮುಖ್ಯಮಂತ್ರಿ ಕೆಸಿಆರ್‌ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ವ್ಯಕ್ತಿ ಶವವಾಗಿ ಪತ್ತೆ

0 comments

Hyderabad: ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಎನ್‌ ರಾಜಲಿಂಗಮೂರ್ತಿ ಎಂಬಾತ ಶವವಾಗಿ ಪತ್ತೆಯಾಗಿದ್ದಾನೆ.

ಕಾಳೇಶ್ವರಂ ಯೋಜನೆಯ ಭಾಗವಾಗಿ ಮೇಡಿಗಡ್ಡ ಬ್ಯಾರೇಜ್‌ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪ ಮಾಡಿ ಮಾಜಿ ಮುಖ್ಯಮಂತ್ರಿ ಮತ್ತು ಇತರರ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ್ದ ಎನ್‌ ರಾಜಲಿಂಗಮೂರ್ತಿ ಬುಧವಾರದಂದು ರಾತ್ರಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಭೂ ವಿವಾದದ ಹಿನ್ನೆಲೆ ಇಬ್ಬರು ಆರೋಪಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ.

ಗಾಯಗೊಂಡ ರಾಜಲಿಂಗಮೂರ್ತಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

You may also like