Home Crime ಕೊನೆಗೂ ಕೇರಳ ಯೂಟ್ಯೂಬರ್‌ ಶಿಂಜಿತಾ ಮುಸ್ತಫಾ ಅರೆಸ್ಟ್‌: ನಾಲ್ಕು ದಿನ ನ್ಯಾಯಾಂಗ ಬಂಧನ

ಕೊನೆಗೂ ಕೇರಳ ಯೂಟ್ಯೂಬರ್‌ ಶಿಂಜಿತಾ ಮುಸ್ತಫಾ ಅರೆಸ್ಟ್‌: ನಾಲ್ಕು ದಿನ ನ್ಯಾಯಾಂಗ ಬಂಧನ

ತಿರುವನಂತಪುರಂ: ವ್ಯೂವ್ಸ್‌ಗಾಗಿ ಬಸ್ಸಿನಲ್ಲಿ ವ್ಯಕ್ತಿಯೊಬ್ಬ ತನ್ನ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನುವ ವಿಡಿಯೋವನ್ನು ಹಂಚಿಕೊಂಡಿದ್ದ ಶಿಂಜಿತಾ ಮುಸ್ತಫಾಳನ್ನು ಕೇರಳ ಪೊಲೀಸರು ಬಂಧನ ಮಾಡಿದ್ದಾರೆ.

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಕೋಯಿಕ್ಕೋಡ್‌ನ ಬಡಗರದಲ್ಲಿರುವ ಸಂಬಂಧಿಕರ ಮನೆಯಲ್ಲಿದ್ದ ಈಕೆಯನ್ನು ಬಂಧನ ಮಾಡಲಾಗಿದೆ.

ಖಾಸಗಿ ಬಸ್ಸಿನಲ್ಲಿ ಸಂಚಾರ ಮಾಡುತ್ತಿರುವಾಗ ದೀಪಕ್‌ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನುವುದನ್ನು ಶಿಂಜಿತಾ ಆರೋಪ ಮಾಡಿದ್ದಾಳೆ. ಈ ವಿಡಿಯೋ ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಈ ವಿಡಿಯೋ ವೈರಲ್‌ ಬೆನ್ನಲ್ಲೇ ದೀಪಕ್‌ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರು.

ದೀಪಕ್‌ ಅವರದ್ದು ಯಾವುದೇ ತಪ್ಪಿಲ್ಲದಿದ್ದರೂ ಆಕೆಯೇ ಅವರ ಬಳಿ ಹೋಗಿ ವಿಡಿಯೋ ಮಾಡಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು. ಪ್ರಚಾರದ ಆಸೆಗಾಗಿ ವಿಡಿಯೋ ಮಾಡಿ ವ್ಯಕ್ತಿಯ ಸಾವಿಗೆ ಕಾರಣವಾಗಿದ್ದಕ್ಕೆ ಶಿಂಜಿತಾಳನ್ನು ಬಂಧನ ಮಾಡಬೇಕೆಂದು ಒತ್ತಾಯ ಕೇಳಿಬಂದಿತ್ತು.

ದೀಪಕ್‌ ಅವರ ಪೋಷಕರು ದೂರು ಸಲ್ಲಿಸಿದ ನಂತರ ಪೊಲೀಸರು ಜಾಮೀನು ರಹಿತ ಸೆಕ್ಷನ್‌ ಅಡಿಯಲ್ಲಿ ಕೇಸು ದಾಖಲು ಮಾಡಿದ್ದರು. ಪ್ರಕರಣದ ನಂತರ ಶಿಂಜಿತಾ ತನ್ನ ಫೋನ್‌ ಸ್ವಿಚ್‌ ಆಫ್‌ ಮಾಡಿ ನಾಪತ್ತೆಯಾಗಿದ್ದಳು. ಇದೀಗ ಕೋರ್ಟ್‌ ಶಿಂಜಿತಾ ಮುಸ್ತಫಾಳಿಗೆ ನಾಲ್ಕು ದಿನದ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.