Home » Mangaluru: 2 ದ್ವಿಚಕ್ರ ವಾಹನಗಳ ನಡುವೆ ಅಪಘಾತ ,ಓರ್ವ ಸಾವು

Mangaluru: 2 ದ್ವಿಚಕ್ರ ವಾಹನಗಳ ನಡುವೆ ಅಪಘಾತ ,ಓರ್ವ ಸಾವು

by Praveen Chennavara
2 comments
Mangaluru

Mangaluru: 2 ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟ ಘಟನೆ ಕಲ್ಲಾಪು ಜಂಕ್ಷನ್ ಬಳಿ ಗುರುವಾರ ನಡೆದಿದೆ.

ಇದನ್ನೂ ಓದಿ: Parliment Election : ಕರ್ನಾಟಕದಲ್ಲಿ ಟುಸ್ ಆಯ್ತಾ ಮೋದಿ ಹವಾ – ಈ ಕ್ಷೇತ್ರಗಳಲ್ಲಿ ಬಿಜೆಪಿ ಸೋಲು ಫಿಕ್ಸಾ ?!

ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಧಾವಿಸುತ್ತಿದ್ದ ಸ್ಕೂಟರ್ ಗೆ ಕಲ್ಲಾಪು ಜಂಕ್ಷನ್ ನಲ್ಲಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಮತ್ತೊಂದು ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಸಹ ಸವಾರ ಸಾವನ್ನಪ್ಪಿದ್ದಾರೆ.

ಮೃತ ಯುವಕನನ್ನು ಉಳ್ಳಾಲ ಕೋಟೆಪುರದ ಕೋಡಿ ನಿವಾಸಿ ಅಹಮ್ಮದ್ ನಿಷಾದ್ (22) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: POK: ಕೆಲವರು ಮಾಡಿದ ತಪ್ಪಿನಿಂದ ಪಿಓಕೆ ಮೇಲೆ ಹಿಡಿತ ಕಳೆದುಕೊಂಡೆವು : ನೆಹರು ವಿರುದ್ಧ ಎಸ್ ಜೈಶಂಕರ್ ಪರೋಕ್ಷ ಟೀಕೆ

ಗುರುವಾರ ಮುಂಜಾನೆ ನಾಲ್ಕು ಗಂಟೆಯ ವೇಳೆ ಸಯ್ಯದ್ ಹಫೀಝ್ ಎಂಬವರೊಂದಿಗೆ ಸ್ಕೂಟರ್ ನಲ್ಲಿ ಸಹ ಸವಾರನಾಗಿ ಮಂಗಳೂರಿನಿಂದ ತೊಕ್ಕೊಟ್ಟಿಗೆ ಬರುತ್ತಿದ್ದ ವೇಳೆ ಕಲ್ಲಾಪು ಜಂಕ್ಷನ್ ನಲ್ಲಿ ತೊಕ್ಕೊಟ್ಟಿನಿಂದ ಬಂದು ಗ್ಲೋಬಲ್ ಮಾರ್ಕೆಟ್ ಗೆ ಕ್ರಾಸ್ ಆಗುತ್ತಿದ್ದ ಸ್ಕೂಟರ್ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ರಭಸಕ್ಕೆ ಎರಡೂ ಸ್ಕೂಟರ್ ಸವಾರರು ರಸ್ತೆಗೆ ಬಿದ್ದಿದ್ದು. ಗಂಭೀರ ಗಾಯಗೊಂಡ ಅಹಮ್ಮದ್ ನಿಷಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಸ್ಕೂಟರ್ ಸವಾರ ಹಫೀಝ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಇನ್ನೊಂದು ಸ್ಕೂಟರ್‌ನ ಸವಾರ ಕುತ್ತಾರು ಪದವು ನಿವಾಸಿ ಅಬೂಬಕ್ಕ‌ರ್ ಸಿದ್ದೀಕ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

You may also like

Leave a Comment